

ಹೊಳಲ್ಕೆರೆ: ಯಾವುದೇ ಕಾಮಗಾರಿ ಮಾಡಿದರೂ ಹತ್ತಾರು ವರ್ಷಗಳ ಕಾಲ ಬಾಳಿಕೆ ಬರುವಂತಿರಬೇಕು. ಈ ಉದ್ದೇಶದಿಂದಲೇ ಶಾಗಲೆ ಹಳ್ಳಕ್ಕೆ ಎರಡು ಕೋಟಿ ರೂ.ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡಲಾಗಿದೆ ಎಂದು ಶಾಸಕ ಡಾ.ಎಂ.ಚಂದ್ರಪ್ಪ ಹೇಳಿದರು.
ತಾಲೂಕಿನ ಹಿರಿಯೂರಿನಿಂದ ಅಂದನೂರಿಗೆ ಹರಿದು ಹೋಗುವ ಶಾಗಲೆ ಹಳ್ಳಕ್ಕೆ ನೂತನವಾಗಿ ನಿರ್ಮಿಸಿರುವ ಬ್ರಿಡ್ಜ್ ಕಂ ಬ್ಯಾರೇಜ್ ಉದ್ಘಾಟಿಸಿ ಭಾನುವಾರ ಮಾತನಾಡಿದರು.
ಮಳೆ ನೀರು ವ್ಯರ್ಥವಾಗಿ ಹರಿದು ಹೋಗುವುದನ್ನು ತಡೆಯುವುದಕ್ಕಾಗಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಿಸಿದ್ದರಿಂದ ರೈತರಿಗೆ ಉಪಯೋಗವಾಗಿದೆ. ಅಧಿಕಾರ ಶಾಶ್ವತವಲ್ಲ ಎಂದರು.
ನಾನು ವಿರೋಧ ಪಕ್ಷದಲ್ಲಿದ್ದರೂ ಸರ್ಕಾರದಿಂದ ಅನುದಾನ ತರುವುದು ಕಷ್ಟವೇನಲ್ಲ. ಯಾವ್ಯಾವ ಇಲಾಖೆಯಲ್ಲಿ ಏನೇನು ಸಿಗುತ್ತೆ ಎನ್ನುವುದನ್ನು ತಿಳಿದುಕೊಂಡಿದ್ದೇನೆ.
ಹಾಗಾಗಿ ಕ್ಷೇತ್ರದ ಅಭಿವೃದ್ದಿಗೆ ಯಾವ ಧಕ್ಕೆಯೂ ಆಗದಂತೆ ನೋಡಿಕೊಳ್ಳುತ್ತೇನೆ ಎಂದು ಜನತೆಗೆ ಭರವಸೆ ನೀಡಿದರು.
ಸಾಣೆಹಳ್ಳಿಯ ಡಾ.ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.
ಗ್ರಾಪಂ ಅಧ್ಯಕ್ಷೆ ಸಾಕಮ್ಮ ರಾಜಪ್ಪ, ಲಿಂಗರಾಜ್, ಮಾಲಿಂಗಪ್ಪ, ಬಸವರಾಜ್, ಬಸಯ್ಯ, ಚಂದ್ರಶೇಖರಯ್ಯ, ಪರಮೇಶ್ವರಪ್ಪ, ಚಂದ್ರಣ್ಣ, ಕುಮಾರ್, ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ವೆಂಕಟರಮಣ, ಗುತ್ತಿಗೆದಾರ ಅಜ್ಜಪ್ಪ ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.