ಮಳೆ, ಗಾಳಿಗೆ ಶಾಲೆ ಕಟ್ಟಡ ಕುಸಿತ

0101
Published on

ಬೆಳಗಾವಿ: ಚನ್ನಮ್ಮ ಕಿತ್ತೂರ ತಾಲೂಕಿನ ಶಿವನೂರು ಗ್ರಾಮದಲ್ಲಿ ಭಾನುವಾರ ಸಂಜೆ ಸುರಿದ ಭಾರಿ ಮಳೆಗೆ ಸ್ಥಳೀಯ ಸರ್ಕಾರಿ ಶಾಲೆ ಕಟ್ಟಡ ಕುಸಿದಿದೆ. ಲಾಕ್‌ಡೌನ್ ಹಿನ್ನೆಲೆಯಲ್ಲಿ ಸರ್ಕಾರಿ ಶಾಲೆಗಳಿಗೆ ರಜೆ ನೀಡಿದ್ದರಿಂದ ಭಾರಿ ಅನಾಹುತ ತಪ್ಪಿದಂತಾಗಿದೆ.

ಶಾಲೆಯ ಕಟ್ಟಡ ಕಳಪೆಯಾಗಿದ್ದರಿಂದ ದುರ್ಘಟನೆ ನಡೆದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಈ ಕುರಿತು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ ಮೊಬೈಲ್ ಕರೆ ಸ್ವೀಕರಿಸದೆ ಜಾರಿಕೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net