ರಾಜ್ಯದಲ್ಲಿ ಮಳೆ ಇಳಿಮುಖ : ಕೆಲವೆಡೆ ಮಾತ್ರ ಬಿರುಸು

rain (5)
Published on

ಬೆಂಗಳೂರು: ರಾಜ್ಯದಲ್ಲೆಡೆ ಮಳೆ ಇಳಿಮುಖವಾಗಿದೆ.ಕರಾವಳಿ,ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆ ಮತ್ತು ದಕ್ಷಿಣ ಕರ್ನಾಟಕದಲ್ಲಿ ಕೆಲವೆಡೆ ಸೋಮವಾರದಿಂದ ಬಿಸಿಲಿನ ವಾತಾವರಣ ಕಾಣಿಸಿಕೊಂಡಿದ್ದು, ಒಣಹವೆ ಮುಂದುವರಿದಿದೆ.

ಕೊಡಗಿನಲ್ಲಿ ಮುಂದಿನ 4 ದಿನ, ಚಿಕ್ಕಮಗಳೂರು ಮತ್ತು ಹಾಸನದಲ್ಲಿ ಅ.15ರಿಂದ ಅ.17ರವರೆಗೆ ಜೋರು ಮಳೆಯಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಅ.14, ಚಾಮರಾಜನಗರ, ಮೈಸೂರು ಅ.15 ಹಾಗೂ ಶಿವಮೊಗ್ಗದಲ್ಲಿ ಅ.16ರಿಂದ ಮುಂದಿನ 2 ದಿನ ಬಿರುಸಾಗಿ ಮಳೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಇರಲಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೆಂಗಳೂರು ನಗರ, ಬೆಂ.ಗ್ರಾಮಾಂತರ ಹಾಗೂ ಮಂಡ್ಯದಲ್ಲಿ ಮುಂದಿನ 5 ದಿನ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net