ರಾಜ್ಯದಲ್ಲಿ ಮಳೆ ತುಸು ಇಳಿಮುಖ

rain
ಮೂಡು ಅಲೆವೂರಿನಲ್ಲಿ ಶುಕ್ರವಾರ ಬೆಳಗ್ಗೆ ಪ್ರವಾಹ ಪೀಡಿತ ಪ್ರದೇಶದಲ್ಲಿ ಸಿಲುಕಿಕೊಂಡಿದ್ದ ಜನರನ್ನು ರಕ್ಷಣಾ ತಂಡ ಸದಸ್ಯರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು
Published on

ಬೆಂಗಳೂರು:ರಾಜ್ಯದಲ್ಲಿ ಅಬ್ಬರಿಸುತ್ತಿದ್ದ ಮಳೆ ತುಸು ಇಳಿಮುಖವಾಗಿದೆ. ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಭಾನುವಾರ ಸಾಧಾರಣ ಪ್ರಮಾಣದಲ್ಲಿ ಮಳೆ ಸುರಿದಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಮುಂದಿನ 24 ಗಂಟೆ ಜೋರಾಗಿ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಆರೆಂಜ್​ ಅರ್ಲಟ್​ ಕೊಟ್ಟಿದೆ. ಜು.23ರಿಂದ ಜು.26ರವರೆಗೆ ಈ ಮೇಲಿನ ಜಿಲ್ಲೆಗಳಲ್ಲಿ ಯೆಲ್ಲೋ ಅರ್ಲಟ್​ ನೀಡಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಜು 22 ರಂದು ಆರೆಂಜ್​ ಅರ್ಲಟ್​ ಇದ್ದರೆ, ಬೆಳಗಾವಿ, ಬೀದರ್​, ಕಲಬುರಗಿಯಲ್ಲಿ ಮುಂದಿನ 24 ಗಂಟೆ ಯೆಲ್ಲೋ ಅರ್ಲಟ್​ ಇರಲಿದೆ. ಕೆಲ ಜಿಲ್ಲೆ ಹೊರತುಪಡಿಸಿ ಮುಂದಿನ ಐದು ದಿನ ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ ಬಹುತೇಕ ಜಿಲ್ಲೆಗಳಲ್ಲಿ ಸಾಧಾರಣ ವರ್ಷಧಾರೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಇಲಾಖೆ ಹಿರಿಯ ಅಧಿಕಾರಿ ಸಿ.ಎಸ್​.ಪಾಟೀಲ್​ ಮಾತನಾಡಿ, ಜು. 6ರಿಂದ ಜು.19ರವರೆಗೆ ಮಲೆನಾಡು, ಕರಾವಳಿ ವ್ಯಾಪ್ತಿಯ ಜಿಲ್ಲೆಗಳಲ್ಲಿ ರೆಡ್​ ಅರ್ಲಟ್​ ನೀಡಲಾಗಿತ್ತು. ಆದರೆ, ಎರಡು ದಿನಗಳಿಂದ ಮಳೆ ಪ್ರಮಾಣ ತುಸು ಇಳಿಮುಖವಾಗಿದೆ. ಈಗಿನ ಹವಾಮಾನ ಪರಿಸ್ಥಿತಿ ಗಮನಿಸಿದರೆ ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆ ತಗ್ಗಿದೆ. ಆದರೆ, ರಾಜ್ಯದಲ್ಲಿ ಆಗಸ್ಟ್​ನಲ್ಲಿಯೂ ಇನ್ನಷ್ಟು ಮಳೆಯಾಗುವ ಸಾಧ್ಯತೆ ಇದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net