ರಾಜ್ಯದಲ್ಲಿ ಮುಂದಿನ 5 ದಿನ ಮಳೆಯ ಸಿಂಚನ

Rain
Published on

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ಝಳ ಹೆಚ್ಚುತ್ತಿರುವ ನಡುವೆಯೂ ಮುಂದಿನ 5 ದಿನ ಗುಡುಗು ಮಿಂಚು ಸಹಿತ ಮಳೆ ಸಿಂಚನವಾಗಲಿದೆ. ಶುಕ್ರವಾರ ರಾಜ್ಯದ ಕೆಲವೆಡೆ ಮೋಡ ಕವಿದ ವಾತಾವರಣ ಜತೆಗೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಿದೆ.

ಹಾಸನ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಬೆಂಗಳೂರು, ಬೆಂ.ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಮತ್ತು ವಿಜಯನಗರದಲ್ಲಿ ಏ.22ರಿಂದ ಏ.26ರವರೆಗೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು ಮತ್ತು ಯಾದಗಿರಿಯಲ್ಲಿ ಮುಂದಿನ 4 ದಿನ ಮಳೆ ಬೀಳಲಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಏ.22 ಮತ್ತು ಏ.23ರಂದು ಸಾಧಾರಣ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಗರಿಷ್ಠ ತಾಪಮಾನದಲ್ಲಿ ಕಲಬುರಗಿಯಲ್ಲಿ 41.4 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾದರೆ, ರಾಯಚೂರು 40.2, ವಿಜಯಪುರ 39.4 ಮತ್ತು ಬಳ್ಳಾರಿ 39.1 ಉಷ್ಣಾಂಶ ವರದಿಯಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net