ಕಾಫಿ ನಾಡಿನಲ್ಲಿ ತಂಪೆರದ ಮಳೆರಾಯ

11 ckm 4
ಚಿಕ್ಕಮಗಳೂರು ತಾಲೂಕಿನ ಆವುತಿ ಹೋಬಳಿಯ ಹಂಗರವಳ್ಳಿ ಭಾಗದಲ್ಲಿ ಸುರಿದ ಸಾಧಾರಣ ಮಳೆ.
Published on

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದ ಕೆಲವೆಡೆ ಧಾರಾಕಾರವಾಗಿ ಮಳೆ ಸುರಿದಿದ್ದರೆ ಇನ್ನೂ ಕೆಲವೆಡೆ ಸಾಧಾರಣ ಮಳೆಯಾಗಿದೆ. ಬಾಳೆಹೊನ್ನೂರು ಭಾಗದಲ್ಲಿ ಧಾರಾಕಾರವಾಗಿ ಮಳೆ ಸುರಿದಿದ್ದರಿಂದಾಗಿ ತಂಪಿನ ವಾತಾವರಣ ನಿರ್ಮಾಣವಾಗಿದೆ.

ಇನ್ನು ಚಿಕ್ಕಮಗಳೂರು ತಾಲೂಕಿನ ಆವುತಿ ಹೋಬಳಿಯಲ್ಲಿಯೂ ಸಾಧಾರಣ ಮಳೆಯಾಗಿದೆ. ಹಂಗರವಳ್ಳಿ, ಕೆರೆಮಕ್ಕಿ, ಬೈಗೂರು ಗ್ರಾಮಗಳಲ್ಲಿ ಸಾಧಾರಣ ಮಳೆಯಾಗಿದೆ. ಕೆಲ ದಿನಗಳಿಂದ ಮಲೆನಾಡು ಭಾಗದ ಅಲ್ಲಲ್ಲಿ ಮಳೆಯಾಗುತ್ತಿರುವುದು‌ ರೈತರ ಸಂತಸಕ್ಕೆ ಕಾರಣವಾಗಿದೆ. ಮಳೆ ಇಲ್ಲದೆ ಭೀಕರ ಬರದಿಂದ ಕಾಫಿ ಬೆಳೆಯನ್ನು ಉಳಿಸಿಕೊಳ್ಳುವುದು ಹೇಗೆ ಎಂಬ ಚಿಂತೆಯಲ್ಲಿದ್ದ ಕಾಫಿ ಬೆಳಗಾರರ ಮುಖದಲ್ಲಿ ಮಂದಹಾಸ ಮೂಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net