12ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಕೆ:2 ದಿನ ಬಳಿಕ ಉಷ್ಣಾಂಶ ಏರಿಕೆ

Rain_cloud
Published on

ಬೆಂಗಳೂರು:ಬಂಗಾಳಕೊಲ್ಲಿಯ ಆಗ್ನೇಯ ಭಾಗದಲ್ಲಿ ತೇವಾಂಶ ಭರಿತ ಮೋಡಗಳಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಏ.12ರವರೆಗೆ ಗುಡುಗು ಸಹಿತ ಆಲಿಕಲ್ಲು ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ಕೊಟ್ಟಿದೆ.

ಕೊಡಗು, ಮೈಸೂರು,ಚಾಮರಾಜನಗರದಲ್ಲಿ ಬಿರುಸಾಗಿ ಮಳೆಯಾಗುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಕೊಟ್ಟಿದೆ. ಬಳಿಕ,ಈ ಜಿಲ್ಲೆಗಳಲ್ಲಿ ಮುಂದಿನ 5 ದಿನ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಚಿಕ್ಕಮಗಳೂರು, ಹಾಸನ, ಶಿವಮೊಗ್ಗದಲ್ಲಿ ಏ.6ರಿಂದ ಏ.7ರವರೆಗೆ ಮಳೆ ಸುರಿಯಲಿದೆ. ಉತ್ತರ ಕನ್ನಡ, ಬೆಂಗಳೂರು, ಬೆಂ,ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ, ಬಳ್ಳಾರಿಯಲ್ಲಿ ಏ.6ರಂದು ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಮುಂದಿನ 2 ದಿನ ವಾತಾವರಣದಲ್ಲಿ ದೊಡ್ಡ ಪ್ರಮಾಣದಲ್ಲಿ ಬದಲಾವಣೆ ಇರುವುದಿಲ್ಲ. ಬಳಿಕ ದಕ್ಷಿಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದ ವ್ಯಾಪ್ತಿಯ ಜಿಲ್ಲೆಗಳಲ್ಲಿ 2-4 ಡಿ.ಸೆ. ಉಷ್ಣಾಂಶ ಹೆಚ್ಚಳವಾಗಲಿದೆ. ಕರಾವಳಿ ಕರ್ನಾಟಕದ ಗರಿಷ್ಠ ಮತ್ತು ಕನಿಷ್ಠ ತಾಪಮಾನದಲ್ಲಿ ಮುಂದಿನ 5 ದಿನ ಬದಲಾವಣೆ ಇರುವುದಿಲ್ಲ. ಬೆಂಗಳೂರಿನಲ್ಲಿ ಮುಂದಿನ 2 ದಿನ ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನ ಕ್ರಮವಾಗಿ 34 ಡಿ.ಸೆ. ಮತ್ತು 21 ಡಿ.ಸೆ. ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net