ಮಳೆಗಾಲದಲ್ಲಿ ಜ್ವರದ ಬಗ್ಗೆ ನಿರ್ಲಕ್ಷೃ ಸಲ್ಲ

192
Published on

ಜಗಳೂರು: ಮಳೆಗಾಲದಲ್ಲಿ ಶೀತ, ನೆಗಡಿ, ಕೆಮ್ಮು, ಜ್ವರ ಬರುವುದು ಸಾಮಾನ್ಯ. ಹಾಗೆಂದು ನಿರ್ಲಕ್ಷೃ ವಹಿಸಬಾರದು ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ವಿಶ್ವನಾಥ್ ಸಲಹೆ ನೀಡಿದರು.

ಡೆಂೆ ಪ್ರಕರಣ ಹೆಚ್ಚಾಗುತ್ತಿರುವ ಕಾರಣ ಪಟ್ಟಣ ಪಂಚಾಯಿತಿ ಹಾಗೂ ತಾಲೂಕು ಆರೋಗ್ಯ ಇಲಾಖೆ ನೇತೃತ್ವದಲ್ಲಿ ಶುಕ್ರವಾರ ವಿವಿಧ ಬಡಾವಣೆಗಳಲ್ಲಿ ಕೈಗೊಂಡಿದ್ದ ಆರೋಗ್ಯದ ಹಾಗೂ ಸ್ವಚ್ಛತೆ ಬಗ್ಗೆ ಜಾಗೃತಿ ಕಾರ್ಯದ ವೇಳೆ ಮಾತನಾಡಿದರು.

ಕಳೆದ ಎರಡು ತಿಂಗಳಿಂದಲೂ ರಾಜ್ಯಾದಂತ ಡೆಂೆ ಪ್ರಕರಣಗಳು ಹೆಚ್ಚು ದಾಖಲಾಗುತ್ತಿವೆ. ಜಗಳೂರು ತಾಲೂಕಿನಲ್ಲಿ ವಿವಿಧ ರೀತಿಯ ಜ್ವರ ಕಾಣಿಸಿಕೊಳ್ಳುತ್ತಿದೆ. ಅನಾರೋಗ್ಯ ಕಾಣಿಸಿಕೊಂಡ ತಕ್ಷಣವೇ ವೈದ್ಯರಿಂದ ತಪಾಸಣೆ ನಡೆಸಿ ಚಿಕಿತ್ಸೆ ಪಡೆದುಕೊಳ್ಳಬೇಕು. ಬೇಜವಾಬ್ದಾರಿ ತೋರಿದರೆ ಜೀವಕ್ಕೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದರು.

ವೈದ್ಯರು, ಸಿಬ್ಬಂದಿ ತಮ್ಮ ಕರ್ತವ್ಯ ನಿರ್ವಹಿಸುತ್ತಾರೆ. ಸಾರ್ವಜನಿಕರು ಕೂಡ ತಮ್ಮ ಸುತ್ತಲಿನ ಪರಿಸರ ಸ್ವಚ್ಛತೆ ಕಾಪಾಡಬೇಕು. ಗಿಡಗಂಟಿಗಳು ಬೆಳೆಸುವುದು, ಗುಂಡಿಗಳಲ್ಲಿ ನೀರು ನಿಲ್ಲಿಸುವುದು, ಚಿಪ್ಪು, ತೆಂಗಿನಮಟ್ಟೆ ಮತ್ತಿತರ ಸೊಳ್ಳೆ ಕೂರುವಂತಹ ವಸ್ತುಗಳನ್ನು ದೂರವಿಡಬೇಕು. ಮನೆಗಳಲ್ಲಿ ಸೊಳ್ಳೆ ಪರದೆ ಬಳಸುವುದರಿಂದ ಡೆಂೆ ಜ್ವರದಿಂದ ತಪ್ಪಿಸಿಕೊಳ್ಳಬಹುದು. ಇಲ್ಲದಿದ್ದರೆ ಅದಕ್ಕೆ ಯಾವುದೇ ತರಹದ ಔಷಧ ಇರುವುದಿಲ್ಲ, ಎಚ್ಚರಿಕೆ ವಹಿಸಬೇಕು ಎಂದರು.

ಮುಖ್ಯಾಧಿಕಾರಿ ಲೋಕ್ಯಾನಾಯ್ಕಾ ಮಾತನಾಡಿ, ವಾತಾವರಣ ವೈಪರೀತ್ಯದಿಂದ ಮಳೆ ಸುರಿಯುತ್ತಿದ್ದು, ರಸ್ತೆಗಳೆಲ್ಲ ತಗ್ಗು, ಗುಂಡಿಗಳು ಬಿದ್ದು ಮುಚ್ಚಲಾಗುತ್ತದೆ. ಚರಂಡಿ, ಪ್ಲಾಸ್ಟಿಕ್ ವಸ್ತುಗಳು ಮತ್ತು ತೆಂಗಿನ ಚಿಪ್ಪುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ನೋಡಿಕೊಳ್ಳಬೇಕು. ಲಾರ್ವಾಗಳು ಬೆಳೆಯದಂತೆ ಸ್ವಚ್ಛತೆ ಕಾಪಾಡಬೇಕು ಎಂದು ಹೇಳಿದರು.

ಆರೋಗ್ಯ ನಿರೀಕ್ಷಕ ಪ್ರಶಾಂತ್ ಮಾತನಾಡಿದರು. ಪ.ಪಂ. ಸದಸ್ಯ ಲುಕ್ಮಾನ್ ಖಾನ್, ಸಮುದಾಯ ಆರೋಗ್ಯ ಕೇಂದ್ರ ಆರೋಗ್ಯ ನಿರೀಕ್ಷಕರು, ಶುಶ್ರೂಷಕರು, ಆಶಾ ಕಾರ್ಯಕರ್ತೆಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net