ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಿ

ಕಾರಟಗಿ ತಾಲೂಕಿನ ಮುಸ್ಟೂರು ಗ್ರಾಪಂ ಕಚೇರಿ ಆವರಣದಲ್ಲಿ ಗ್ರಾಪಂ ಮಟ್ಟದ ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನಾ ಸಭೆಯನ್ನು ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ್ ಉದ್ಘಾಟಿಸಿದರು. ತಾಲೂಕು ಅಧ್ಯಕ್ಷ ದೇವಪ್ಪ ಭಾವಿಕಟ್ಟಿ, ಪಿಡಿಒ ಸಾಯಿನಾಥ ಇದ್ದರು.

Published on

ಕಾರಟಗಿ: ಗ್ರಾಪಂಗಳಲ್ಲಿ 3 ತಿಂಗಳಗೊಮ್ಮೆ ಗ್ಯಾರಂಟಿ ಯೋಜನೆಗಳ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ್ ಹೇಳಿದರು.

ತಾಲೂಕಿನ ಮುಸ್ಟೂರು ಗ್ರಾಪಂ ಆವರಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗ್ರಾಪಂ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಗ್ಯಾರಂಟಿ ಯೋಜನೆಗಳ ಕುರಿತು ತಾಂತ್ರಿಕ ದೋಷಗಳಿದ್ದರೆ ಗ್ರಾಪಂನಲ್ಲೇ ನಿವಾರಿಸಬೇಕು. ಗ್ಯಾರಂಟಿ ಸಮಿತಿ ಸ್ಥಳೀಯ ಸದಸ್ಯರ ಸಹಕಾರದಿಂದ ಪಿಡಿಒಗಳು ಸಾರ್ವಜನಿಕರಿಗೆ ಯೋಜನೆಗಳ ಕುರಿತು ತಿಳಿಸಬೇಕು. ಮೇನಲ್ಲಿ ಗೃಹಲಕ್ಷ್ಮಿ ಹಣ ಫಲಾನುಭವಿಗಳ ಖಾತೆಗೆ ಜಮೆಯಾಗಿದೆ ಎಂದರು.

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷ ನಾಗರಾಜ ಅರಳಿ, ಸದಸ್ಯರಾದ ರೇಣುಕಮ್ಮ ನಾಯಕ, ರಾಜಾಸಾಬ್ ಜಮಾಪುರ, ತಾಪಂ ಎಡಿ ವನಜಾ, ಗ್ರಾಪಂ ಅಧ್ಯಕ್ಷ ಸುರೇಶ, ಉಪಾಧ್ಯಕ್ಷೆ ಲಿಂಗಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net