

ಮಂಗಳೂರು : ಕೇಂದ್ರ ಸರ್ಕಾರದ ರೈತ, ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಹಾಗೂ ರಾಜ್ಯ ಸರ್ಕಾರದ ಜನಾಗ್ರಹ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಸಂಯುಕ್ತ ಹೋರಾಟ ಕರ್ನಾಟಕ ಇದರ ವತಿಯಿಂದ ನ.26 ರಿಂದ 28ರವರೆಗೆ ನವದೆಹಲಿಯ ರಾಜಭವನದ ಮುಂದೆ ಹಾಗೂ ಬೆಂಗಳೂರಿಗೆ ಪ್ರೀಡಂ ಪಾರ್ಕ್‌ನಲ್ಲಿ ಮಹಾ ಧರಣಿ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ತಿಳಿಸಿದ್ದಾರೆ.
ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಯುಕ್ತ ಕಿಸಾನ್ ಮೋರ್ಚ, ಕಾರ್ಮಿಕ ಸಂಘಟನೆಗಳ ಜಂಟಿ ಸಮಿತಿ ಕರೆ
ಮೇರೆಗೆ 72 ಗಂಟೆಗಳ ಕಾಲ ಪ್ರತಿಭಟನೆ ನಡೆಯಲಿದೆ.ರಾಜ್ಯದಲ್ಲಿ 1ಲಕ್ಷಕ್ಕೂ ಅಧಿಕ ಮಂದಿ ಭಾಗಿಯಾಗಲಿದ್ದಾರೆ. 25 ಸಾವಿರಕ್ಕೂ ದಕ್ಷಿಣ ಕನ್ನಡ ಜಿಲ್ಲೆಯಿಂದ 1 ಸಾವಿರ ಮಂದಿ ರೈತ ಸಂಘದ ಸದಸ್ಯರು ಭಾಗವಹಿಸಲಿದ್ದಾರೆ ಎಂದರು.
ರೈತರ ಕೃಷಿ ಪಂಪ್‌ಸೆಟ್‌ಗಳಿಗೆ ಸಂಪರ್ಕಕ್ಕೆ ಬೇಕಾದ ಮೆಟೀರಿಯಲ್ ಖರ್ಚು ಹಾಗೂ ಸಂಪರ್ಕ ವೆಚ್ಚವನ್ನು ಈ ಹಿಂದಿನಂತೆ ಕೆಪಿಸಿಎಲ್ ಸಂಸ್ಥೆಯೇ ಭರಿಸಬೇಕು. ಈಗ ರಾತ್ರಿ ಸಮಯದಲ್ಲಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಪೂರೈಕೆ ಮಾಡುವುದರಿಂದ ಕಾಡು ಪ್ರಾಣಿ, ಹಾವು, ಚೇಳು ಕಡಿತದಿಂದ ರೈತರಿಗೆ ಸಮಸ್ಯೆ ಉಂಟಾಗಿದೆ. ಕೃಷಿ ಪಂಪ್‌ಸೆಟ್‌ಗಳಿಗೆ ರಾಜ್ಯ ಸರ್ಕಾರ ಪ್ರತೀ ದಿನ ಕನಿಷ್ಠ 7 ಗಂಟೆ
ವಿದ್ಯುತ್ ಪೂರೈಕೆ ಮಾಡಬೇಕು ಎಂದು ಅವರು ಆಗ್ರಹಿಸಿದರು.