ಕೃಷಿಯಲ್ಲಿ ತಾಂತ್ರಿಕತೆ ಅಳವಡಿಸಿಕೊಳ್ಳಿ

oplus_4194304
ಆಲೂರು ಪಟ್ಟಣದ ಕೃಷಿ ಇಲಾಖೆಯಲ್ಲಿ ರೈತರ ದಿನಾಚರಣೆ ಅಂಗವಾಗಿ ಪ್ರಗತಿಪರ ರೈತರನ್ನು ಸನ್ಮಾನಿಸಲಾಯಿತು. ರಮೇಶ್ ಕುಮಾರ್, ಮೋಹನ್ ಕಾಡ್ಲೂರು, ಮಲ್ಲಪ್ಪ ಇತರರು ಇದ್ದರು.
Published on

ಆಲೂರು: ರೈತರು ತಜ್ಞರ ಸಲಹೆಯೊಂದಿಗೆ ನೂತನ ತಾಂತ್ರಿಕತೆ ಅಳವಡಿಸಿಕೊಂಡು ಹೆಚ್ಚಿನ ಆದಾಯಗಳಿಸಿ ಆರ್ಥಿಕ, ಸಾಮಾಜಿಕ ಹಾಗೂ ಪೌಷ್ಟಿಕ ಭದ್ರತೆ ಹೊಂದಬೇಕು ಎಂದು ಕೃಷಿ ಇಲಾಖೆ ತಾಲೂಕು ಸಹಾಯಕ ನಿರ್ದೇಶಕ ರಮೇಶ್ ಕುಮಾರ್ ಹೇಳಿದರು.

ಪಟ್ಟಣದ ಕೃಷಿ ಇಲಾಖೆ ಕಚೇರಿಯಲ್ಲಿ ರೈತರ ದಿನಾಚರಣೆ ಅಂಗವಾಗಿ ಇತ್ತೀಚೆಗೆ ಆಯೋಜಿಸಿದ್ದ ವಿಶೇಷ ಕಾರ್ಯಾಗಾರ ಹಾಗೂ ಪ್ರಗತಿಪರ ರೈತರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಾಜಿ ಪ್ರಧಾನಿ ದಿವಂಗತ ಚೌಧರಿ ಚರಣ್ ಸಿಂಗ್ ಅವರ ಜ್ಞಾಪಕಾರ್ಥವಾಗಿ ರೈತರ ದಿನ ಆಚರಿಸಲಾಗುತ್ತಿದೆ. ಕೃಷಿಯ ಮಹತ್ವ, ರೈತರ ಪರಿಸ್ಥಿತಿಯನ್ನು ಅರಿತು ಅದಕ್ಕೆ ಪೂರಕವಾದ ಯೋಜನೆಗಳನ್ನು ಜಾರಿಗೆ ತಂದಿದ್ದರು ಎಂದು ತಿಳಿಸಿದರು.

ತೋಟಗಾರಿಕಾ ಇಲಾಖೆ ಧನಂಜಯ್ ಮಾತನಾಡಿ, ಮಣ್ಣಿನ ಫಲವತ್ತತೆಗಾಗಿ ಸಾವಯವ ಗೊಬ್ಬರ ಬಳಕೆ ಬಗ್ಗೆ ಮಾಹಿತಿ ಹಂಚಿಕೊಂಡರು. ಇದೇ ಸಂದರ್ಭದಲ್ಲಿ ಕೃಷಿ ಇಲಾಖೆಯಿಂದ ಪ್ರಶಸ್ತಿ ಪುರಸ್ಕೃತರಾಗಿ ಆಯ್ಕೆಯಾದ 11 ಕೃಷಿ ಸಾಧಕ ರೈತರನ್ನು ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಹೊಸಕೋಟೆ ಹೋಬಳಿಯ ರೈತ ಸಂಘದ ಅಧ್ಯಕ್ಷ ಮೋಹನ್ ಕಾಡ್ಲೂರು, ಕೃಷಿಕ ಸಮಾಜದ ಮಾಜಿ ಅಧ್ಯಕ್ಷ ಮಲ್ಲಪ್ಪ, ಜಿಲ್ಲಾ ಆತ್ಮ ಯೋಜನೆಯ ಮಂಜುಳಾ, ಸಮಾಜ ಸೇವಕಿ ಕೆಂಚಮ್ಮ, ಹೊಸಕೋಟೆಯ ವಿ.ಪಿ ಹೆಗಡೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net