ರಾಜಹಂಸಗಡ ಕೋಟೆ ಅಭಿವೃದ್ಧಿಗೆ ಒತ್ತು

1dvk 3
Published on

ಬೆಳಗಾವಿ: ತಾಲೂಕಿನ ರಾಜಹಂಸಗಡ ಕೋಟೆಯನ್ನು ಮುಂದಿನ ಐದು ವರ್ಷದಲ್ಲಿ ಉತ್ತಮ ಪ್ರವಾಸಿ ಕೇಂದ್ರವನ್ನಾಗಿ ಅಭಿವೃದ್ಧಿಗೊಳಿಸಲಾಗುವುದು ಎಂದು ಸಚಿವೆ ಲಕ್ಷಿ$್ಮ ಹೆಬ್ಬಾಳ್ಕರ್​ ಭರವಸೆ ನೀಡಿದರು.

ತಾಲೂಕಿನ ರಾಜಹಂಸಗಡ ಗ್ರಾಮದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಮರಗಾಯಿ ದೇವಿ ಮೂರ್ತಿ ಪ್ರತಿಷ್ಠಾಪನೆ ಹಾಗೂ ಮಹಾಪ್ರಸಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಛತ್ರಪತಿ ಶಿವಾಜಿ ಮಹಾರಾಜರ ಬೃಹತ್​ ಮೂರ್ತಿ ಪ್ರತಿಷ್ಠಾಪನೆಯ ನಂತರ ದೊಡ್ಡ ಮಟ್ಟದಲ್ಲಿ ಪ್ರವಾಸಿಗರನ್ನು ರಾಜಹಂಸಗಡ ಕೋಟೆ ಸೆಳೆಯುತ್ತಿದೆ. ಭವಿಷ್ಯದಲ್ಲಿ ಈ ಕೋಟೆಯ ಜತೆಗೆ ಗ್ರಾಮವೂ ಸಾಕಷ್ಟು ಅಭಿವೃದ್ಧಿಯಾಗಲಿದೆ. ಇಲ್ಲಿಯ ಭೂಮಿಗೂ ಉತ್ತಮ ಬೆಲೆ ಬರಲಿದೆ. ಜನರಿಗೆ ಉದ್ಯೋಗಾವಕಾಶ ಹೆಚ್ಚಲಿದೆ. ವ್ಯಾಪಾರ ವಹಿವಾಟು ಸುಧಾರಣೆಯಾಗಲಿದೆ ಎಂದರು.

ೇತ್ರದ ಯಾವುದೇ ಭಾಗದ ಜನ ಬಂದು ಕೇಳಿದರೂ ಕೆಲಸ ಮಾಡಿಕೊಡುತ್ತಿದ್ದೇನೆ. ಮೊದಲು ಬೆಳಗಾವಿ ಗ್ರಾಮೀಣ ೇತ್ರ ಎನ್ನುವುದು ಯಾರಿಗೂ ಗೊತ್ತಿರಲಿಲ್ಲ. ಈಗ ರಾಜ್ಯದ ಮೂಲೆ ಮೂಲೆಗೂ ಈ ಕ್ಷೇತ್ರ ಚಿರಪರಿಚಿತವಾಗಿದೆ. ಬಾರಾಮತಿ ಮಾದರಿಯಲ್ಲಿ ಗ್ರಾಮೀಣ ೇತ್ರವನ್ನು ಅಭಿವೃದ್ಧಿ ಮಾಡಬೇಕೆನ್ನುವ ಕನಸು ಹೊತ್ತು ಕೆಲಸ ಮಾಡುತ್ತಿದ್ದೇನೆ. ಚುನಾವಣೆ ಮುಗಿದ ನಂತರ ಯಾವುದೇ ರಾಜಕಾರಣವಿಲ್ಲದೆ ಎಲ್ಲರನ್ನೂ ಒಟ್ಟಾಗಿಸಿಕೊಂಡು ಕೆಲಸ ಮಾಡುತ್ತಿದ್ದೇನೆ. ೇತ್ರದಲ್ಲಿ 140ಕ್ಕೂ ಹೆಚ್ಚು ಮಂದಿರ ನಿರ್ಮಾಣ ಮಾಡಲಾಗಿದೆ ಎಂದು ವಿವರಿಸಿದರು.

ಎಪಿಎಂಸಿ ಮಾಜಿ ಅಧ್ಯ ಯುವರಾಜ ಕದಂ ಮಾತನಾಡಿ, ಹೆಬ್ಬಾಳ್ಕರ್​ ಅವರು ಸಚಿವರಾದ ನಂತರ ೇತ್ರ ಸಾಕಷ್ಟು ಅಭಿವೃದ್ಧಿ ಹೊಂದಿದೆ. ಪ ಭೇದ ಮರೆತು ಕೆಲಸ ಮಾಡಿಕೊಡುತ್ತಿದ್ದಾರೆ. ಸಾಕಷ್ಟು ಜನರಿಗೆ ಉದ್ಯೋಗಕ್ಕೆ, ಶಿಣಕ್ಕೆ ನೆರವಾಗಿದ್ದಾರೆ. ಇಂತಹ ಶಾಸಕರನ್ನು ಹಿಂದೆಂದೂ ಕಂಡಿರಲಿಲ್ಲ ಎಂದರು.

ಈ ಸಂದರ್ಭದಲ್ಲಿ ವಿವಿಧ ಮಾಸಾಶನ ಯೋಜನೆಗಳ ಆದೇಶ ಪತ್ರಗಳನ್ನು ಸಚಿವರು ಫಲಾನುಭವಿಗಳಿಗೆ ವಿತರಿಸಿದರು.

ಸಿದ್ದಪ್ಪ ಛತ್ರೆ, ದತ್ತಾ ಪವಾರ, ಭಾವು ಪವಾರ, ಲ್ಮಣ ಚೌಹಾನ, ಪರಶುರಾಮ ನಿಲಜಕರ, ಸಿದ್ದಪ್ಪ ಪಂಜಾಕರ, ರಾಮಾ ಥೋರಾವತ, ರಾಜು ಯಳೇಬೈಲಕರ, ರಾಮಚಂದ್ರ ಗಡ್ಕರಿ, ಯಲ್ಲಪ್ಪ ಥೋರಾವತ, ಗುಂಡು ನಿಲಗಟ್ಕರ, ಸಿಪಿಐ ನಾಗನಗೌಡ, ಕೃಷ್ಣ ತಾವಸೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net