ರಾಜಾಂಗಣ ಪಾರ್ಕಿಂಗ್​ ಪ್ರದೇಶದಲ್ಲಿ ಡಸ್ಟ್​ಬಿನ್​ ಅಳವಡಿಕೆ

udp-12-cmc
Published on

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದ ಪಾರ್ಕಿಂಗ್​ ಪ್ರದೇಶದ ಬಳಿ ಇರುವ ಬ್ಲಾಕ್​ ಸ್ಪಾಟ್​ ತೆರವುಗೊಳಿಸಲಾಗಿದ್ದು, ಶ್ರೀಕೃಷ್ಣಮಠಕ್ಕೆ ಬರುವ ಪ್ರವಾಸಿಗರು ಮತ್ತು ಭಕ್ತಾಧಿಗಳು ಘನತ್ಯಾಜ್ಯ ವಸ್ತುಗಳನ್ನು ಎಸೆದು ಹೋಗುತ್ತಿರುವುದರಿಂದ ಸ್ವಚ್ಛತೆಗಾಗಿ ನಗರಸಭಾ ವತಿಯಿಂದ ಹಸಿಕಸ, ಒಣಕಸ ವಿಂಗಡಣೆ ಮಾಡಿ ಪ್ರತ್ಯೇಕವಾಗಿ ಸಂಗ್ರಹಿಸಲು ಹಸಿರು ಮತ್ತು ನೀಲಿ ಬಣ್ಣದ ಡಸ್ಟ್​ಬಿನ್​ಗಳನ್ನು ಇಡಲಾಯಿತು.

ಪೌರಾಯುಕ್ತ ರಾಯಪ್ಪ ಮಾತನಾಡಿ, ಪ್ರತಿಯೊಬ್ಬ ನಾಗರಿಕರು ಘನತ್ಯಾಜ್ಯ ವಸ್ತುಗಳನ್ನು ಮೂಲದಲ್ಲಿ ವಿಂಗಡಿಸಿ ಎಲ್ಲೆಂದರಲ್ಲಿ ಬಿಸಾಡದೆ ಡಸ್ಟ್​ಬಿನ್​ಗಳಲ್ಲಿ ಹಾಕಿ ನಗರಸಭೆಯ ವಾಹನಕ್ಕೆ ನೀಡಿ, ಸ್ವಚ್ಛಂದ ಪರಿಸರ ನಿಮಾರ್ಣಕ್ಕೆ ಸಹಕರಿಸಬೇಕು. ಪ್ರವಾಸಿಗರು ಕಸವನ್ನು ಎಲ್ಲೆಂದರಲ್ಲಿ ಎಸೆಯದೇ ಡಸ್ಟ್​ಬಿನ್​ಗಳಲ್ಲಿ ಹಾಕಲು ಒಬ್ಬ ಸಿಬ್ಬಂದಿ ನೇಮಕ ಮಾಡಿ ಪ್ರವಾಸಿಗರಿಗೆ ಘನತ್ಯಾಜ್ಯ ವಸ್ತುಗಳ ಬಗ್ಗೆ ತಿಳುವಳಿಕೆ ನೀಡಲಾಗುತ್ತಿದೆ ಎಂದು ಹೇಳಿದರು.

ಸ್ಥಳಿಯ ಸದಸ್ಯ ಗಿರೀಶ್​ ಅಂಚನ್​ ಹಾಗೂ ನಗರಸಭಾ ಪರಿಸರ ಅಭಿಯಂತರೆ ಸ್ನೇಹ ಕೆ.ಎಸ್​, ಆರೋಗ್ಯ ನಿರೀಕ್ಷಕಿ ಶಶಿರೇಖಾ, ಮನೋಹರ, ಸ್ಯಾನಿಟರಿ ಸೂಪರ್​ವೈಸರ್​ಗಳಾದ ಸುರೇಶ್​ ಶೆಟ್ಟಿ, ರಾಜು, ಸುರೇಂದ್ರ, ನಾಗಾರ್ಜುನ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net