ರಾಜರಾಜೇಶ್ವರಿ ನಗರ, ಶಿರಾ ಬೈ ಎಲೆಕ್ಷನ್: ಮತದಾರರಿಗೆ ರಜೆ

Voting
Published on

ಬೆಂಗಳೂರು: ಶಿರಾ ಮತ್ತು ಆರ್​ ಆರ್​ ನಗರ ಕ್ಷೇತ್ರಗಳಿಗೆ ನವೆಂಬರ್​ 3 ರಂದು ಉಪಚುನಾವಣೆ ನಡೆಯಲಿದ್ದು, ಅಂದು ಆ ಎರಡೂ ಕ್ಷೇತ್ರಗಳ ಮತದಾರರಿಗೆ ರಜೆ ಘೋಷಣೆ ಮಾಡಲಾಗಿದೆ.

ಎಲ್ಲ ಔದ್ಯಮಿಕ ಸಂಸ್ಥೆ, ವ್ಯವಹಾರಿಕಾ ಸಂಸ್ಥೆ ಹಾಗೂ ಇತರ ಸಂಸ್ಥೆಗಳ ನೌಕರರಿಗೆ ರಜೆ ಘೋಷಿಸಿ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ ಈ ಎರಡೂ ಕ್ಷೇತ್ರದ ವ್ಯಾಪ್ತಿಯಲ್ಲಿರುವ ರಾಜ್ಯ ಸರ್ಕಾರಿ ಕಚೇರಿಗಳು ಮತ್ತು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಿಗೆ ಅಂದು ರಜೆ ಇರಲಿದೆ. ಪ್ರಜಾಪ್ರತಿನಿಧಿ ಕಾಯ್ದೆ ಅಡಿಯಲ್ಲಿ ವೇತನ ಸಹಿತ ರಜೆಯನ್ನು ಸರ್ಕಾರ ಘೋಷಿಸಿದೆ.

ಶಿರಾ ಮತ್ತು ರಾಜರಾಜೇಶ್ವರಿ ನಗರ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕಾಂಗ್ರೆಸ್​, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ಈಗಾಗಲೇ ನಾಮಪತ್ರ ಸಲ್ಲಿಸಿದ್ದು, ಶತಾಯಗತಾಯ ಗೆಲ್ಲಲ್ಲೇ ಬೇಕೆಂದು ಪಣ ತೊಟ್ಟಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net