ಜೈವಿಕ ಇಂಧನ ಮಂಡಳಿಗೆ ರಾಜಶೇಖರ ನೇಮಕ

Rajashekhar Ramaswamy
Published on

ರಾಯಚೂರು: ರಾಜ್ಯ ಸರ್ಕಾರ ಗುರುವಾರ ಪ್ರಕಟಿಸಿರುವ ನಿಗಮ, ಮಂಡಳಿ ಅಧ್ಯಕ್ಷರ ನೇಮಕದಲ್ಲಿ ನಗರದ ರಾಜಶೇಖರ ರಾಮಸ್ವಾಮಿಗೆ ಕರ್ನಾಟಕ ಜೈವಿಕ ಇಂಧನ ಮಂಡಳಿ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ.
ಸರ್ಕಾರ ಅಕಾರಕ್ಕೆ ಬಂದ ನಂತರದಲ್ಲಿ ಪಕ್ಷದ ನಿಷ್ಠಾವಂತರಿಗೆ ನಿಗಮ, ಮಂಡಳಿಗಳಲ್ಲಿ ಸ್ಥಾನಮಾನ ನೀಡಬೇಕು ಎನ್ನುವ ಬೇಡಿಕೆಯಿತ್ತು. ಜಿಲ್ಲೆಯ ಕನಿಷ್ಠ ಮೂವರಿಗೆ ನಿಗಮ, ಮಂಡಳಿ ಅಧ್ಯಕ್ಷ ಸ್ಥಾನ ನೀಡುವ ನಿರೀಕ್ಷೆಯಿತ್ತು. ಒಬ್ಬರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಪ್ತರಲ್ಲಿ ಗುರುತಿಸಿಕೊಂಡಿರುವ ರಾಜಶೇಖರ ರಾಮಸ್ವಾಮಿ ಹಲವಾರು ವರ್ಷಗಳಿಂದ ಪಕ್ಷಕ್ಕಾಗಿ ದುಡಿಯುತ್ತಾ ಬಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net