ವುಡ್‌ಲ್ಯಾಂಡ್ಸ್‌ನಲ್ಲಿ ರಾಜಸ್ಥಾನ ಕರಕುಶಲ ವಸ್ತುಗಳ ಮಾರಾಟ ಮೇಳಕ್ಕೆ ಚಾಲನೆ

Mng-may7-woodland1
Published on

ಮಂಗಳೂರು : ರಾಜಸ್ಥಾನ ಆರ್ಟ್ ಮತ್ತು ಕ್ರಾಫ್ಟ್ ಅವರ ಸಂಯೋಜನೆಯಲ್ಲಿ ರಾಜಸ್ಥಾನ ಆರ್ಟ್ ಹಾಗೂ ಕ್ರಾಫ್ಟ್ ವಿವಿಧ ಕರಕುಶಲ ವಸ್ತುಗಳ ಹಾಗೂ ಕೈಮಗ್ಗ ಸೀರೆಗಳ ಹಾಗೂ ಅಭರಣಗಳು ಮತ್ತು ಕಲಾಕೃತಿಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ ನಗರದ ಬಂಟ್ಸ್ ಹಾಸ್ಟೇಲ್ ರಸ್ತೆಯ ಹೋಟೇಲ್ ವುಡ್‌ಲ್ಯಾಂಡ್ಸ್‌ನಲ್ಲಿ ಬುಧವಾರ ಆರಂಭಗೊಂಡಿತು.

ನಾಟಕ ನಿರ್ದೇಶಕ ವಿಜಯ ಕುಮಾರ್ ಕೊಡಿಯಾಲ್ ಬೈಲ್ ಮೇಳವನ್ನು ಉದ್ಘಾಟಿಸಿದರು. ಮಂಗಳೂರಿಗೆ ಬೇರೆ ರಾಜ್ಯದ ಉಡುಪುಗಳನ್ನು ಖರೀದಿಸಲು ಸದವಕಾಶವಾಗಿದೆ. ವೈವಿಧ್ಯಮಯ ಉಡುಪು, ಕಲಾಕೃತಿಗಳನ್ನು ಖರೀದಿಸಿ ಬೇರೆ ರಾಜ್ಯಗಳ ಜತೆ ಬಾಂಧವ್ಯವನ್ನು ಗಟ್ಟಿಗೊಳಿಸಬೇಕಾಗಿದೆ ಎಂದರು.

ಚಿತ್ರ ನಿರ್ದೇಶಕ ಹಾಗೂ ನಟ ಸಾಯಿ ಕೃಷ್ಣ ಕುಡ್ಲ ಹಾಗೂ ಚಿತ್ರನಟಿ ವೆನ್ಸಿಟಾ ಡೈಸ್ ಮುಖ್ಯ ಅತಿಥಿಗಳಾಗಿ ಶುಭ ಹಾರೈಸಿದರು.

ಮೇಳದ ಅಯೋಜಕ ಪ್ರಮೋದ್ ಸಿಂಗ್ ಮಾತನಾಡಿ, ಈ ಗ್ರಾಮೀಣ ಮೇಳದಲ್ಲಿ ರಾಜಸ್ಥಾನ ಸೇರಿದಂತೆ ವಿವಿಧ ರಾಜ್ಯಗಳ ಕೈಮಗ್ಗದ ಸೀರೆ ಹಾಗೂ ಸಿಲ್ಕ್ ಸೀರೆಗಳು ಮತ್ತು ಕರಕುಶಲ ವಸ್ತುಗಳ ಬೃಹತ್ ಸಂಗ್ರಹವಿದ್ದು, ಮಾರಾಟ ಮತ್ತು ಪ್ರದರ್ಶನ ನಡೆಯಲಿದೆ. ರಾಜಸ್ಥಾನ ಸಿಲ್ಕ್ ಸಾರಿ, ಮೈಸೂರ್, ಒರಿಸ್ಸಾ, ಕಾಂತ ವರ್ಕ್, ಬಾಗಲ್ಪುರ್, ಬನರಸ್ ಸಿಲ್ಕ್ ಸಾರಿಗಳು, ವೆಜ್ ಡೈ ಬ್ಲಾಕ್ ಪ್ರಿಂಟೆಡ್ ಸೀರೆಗಳು, ಮಧುರೈ ಸುಗುಡಿ ಕಾಟನ್ ಸೀರೆಗಳು, ಸಾಂಬ್ಲಪುರಿ ಇಕ್ತಾ ಸೀರೆಗಳು, ಕೋಸಿಯಾ ಕೈ ಮಗ್ಗದ ಸೀರೆಗಳು, ಕೈಮಗ್ಗದ ಕಾಟನ್ ಸೀರೆಗಳು, ಚಾಂದಾರ್ ಕಾಟನ್ ಸೀರೆಗಳು, ಪೌಂಚಪಲ್ಲಿ ಕೈಮಗ್ಗದ ಸೀರೆಗಳು, ಫೋಲ್ಕರಿ ವಿನ್ಯಾಸದ ಪಾಟಿಯಾಲ, ಫೋಲ್ಕರಿ ಬೆಡ್‌ಶೀಟ್‌ಗಳು ಹಾಗೂ ಸೋಫಾ ಸೆಟ್ ಕವರ್, ಸಿಲ್ಕ್ ಕುಶನ್ ಕವರ್, ರಾಜಸ್ಥಾನ್ ಬೆಡ್‌ಶೀಟ್‌ಗಳು, ಇತರ ಕೈಮಗ್ಗದ ಸೀರೆಗಳು ಇಲ್ಲಿ ಲಭ್ಯವಿದೆ ಎಂದರು.

ಜೋಧ್ಪುರ್ ಕರಕುಶಲ ಮರದ ಪಿಠೋಪರಣಗಳು, ಸಾರಂಗ್ಪುರ್ ಮರದ ಪಿಠೋಪರಣಗಳು, ಹೈದರಾಬಾದ್ ಕಪ್ಪು ಮೇಟಲ್‌ನ ವಿಗ್ರಹಗಳು, ಹಿತ್ತಾಳೆಯ ಕಲಾಕೃತಿಗಳು, ವಿಶೇಷ ಶೈಲಿಯ ಜೈಪುರ್ ಆಭರಣಗಳು, ವಿಶೇಷ ವಿನ್ಯಾಸದ ವೈವಿಧ್ಯಮಯ ಮಣ್ಣಿನ ವಿಗ್ರಹಗಳು, ನೀಲಿ ಬಣ್ಣದ ಕ್ರಾಕರಿ ವಸ್ತುಗಳ ಬೃಹತ್ ಸಂಗ್ರಹಗಳಿವೆ ಎಂದು ಪ್ರಮೋದ್ ಸಿಂಗ್ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net