

ಧಾರವಾಡ: ಮಕ್ಕಳು ಸಂಶೋಧನೆ ಹಾಗೂ ಅನ್ವೇಷಣೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಬೇಕು. ವಿಜ್ಞಾನ ಹಾಗೂ ತಂತ್ರಜ್ಞಾನ ಕ್ಷೇತ್ರದಲ್ಲಿ ಸಾಧನೆಗೈದು ಶಾಲೆ ಮತ್ತು ಜಿಲ್ಲೆಗೆ ರಾಷ್ಟ್ರೀಯ ಮಟ್ಟದಲ್ಲಿ ಹೆಸರು ತರಬೇಕು ಎಂದು ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಅಧ್ಯಕ್ಷ ಈರೇಶ ಅಂಚಟಗೇರಿ ಹೇಳಿದರು.
ನಗರದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾದ ಅಂಗ ಸಂಸ್ಥೆಯಾದ ರಾಜೀವ ಗಾಂಧಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬುಧವಾರ ಆಯೋಜಿಸಿದ್ದ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರದರ್ಶನ ಉದ್ಘಾಟಿಸಿದ ಕರ್ನಾಟಕ ಮಹಾವಿದ್ಯಾಲಯದ ಉಪ ಪ್ರಾಚಾರ್ಯ ಡಾ. ಜಗದೀಶ ಗುಡದೂರ ಮಾತನಾಡಿ, ವಿದ್ಯಾರ್ಥಿಗಳ ಪ್ರಾಯೋಗಿಕ ಶಿಕ್ಷಣ ನಿಜ ಜೀವನದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ ಎಂದರು.
ಡಾ. ಎಸ್.ಬಿ. ಹಿಂಚಿಗೇರಿ, ರಾಧಾಕೃಷ್ಣನ್, ಪ್ರಾಚಾರ್ಯೆ ವೀಣಾ ತುಪ್ಪದ, ಸುರೇಖಾ ಚಾಂದಗುಡೆ ಹಾಗೂ ಇತರರಿದ್ದರು.