

ಗುರುಪುರ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಬಂಟ್ವಾಳ ಕೃಷಿ ಇಲಾಖೆ ಸಹಯೋಗದಲ್ಲಿ ಪೊಳಲಿ ದೇವಸ್ಥಾನದ ಚೆಂಡಿನ ಗದ್ದೆಯಲ್ಲಿ ಯಾಂತ್ರೀಕೃತ ಭತ್ತದ ನೇಜಿ ನಾಟಿಗೆ ಶಾಸಕ ರಾಜೇಶ್ ನಾಯಕ್ ಸೋಮವಾರ ಚಾಲನೆ ನೀಡಿದರು.
ನಾಟ ಆರಂಭಿಸುವ ಮುಂಚೆ ದೇವಸ್ಥಾನದ ಅರ್ಚಕ ನಾರಾಯಣ ಭಟ್ ಪ್ರಾರ್ಥನೆ ಸಲ್ಲಿಸಿದರು. ಪೊಳಲಿ ಸಿಎ ಬ್ಯಾಂಕ್ ಉಪಾಧ್ಯಕ್ಷ ವೆಂಕಟೇಶ ನಾವಡ, ನಿರ್ದೇಶಕ ಸುಕೇಶ್ ಚೌಟ, ತಾಪಂ ಮಾಜಿ ಸದಸ್ಯ ಯಶವಂತ ಪೊಳಲಿ, ಕರಿಯಂಗಳ ಪಂಚಾಯಿತಿ ಮಾಜಿ ಅಧ್ಯಕ್ಷೆ ಚಂದ್ರಾವತಿ ದೇವಾಡಿಗ, ಸದಸ್ಯ ಲೋಕೇಶ್ ಭರಣಿ, ಪಿಲಾತಬೆಟ್ಟು ಪಂಚಾಯಿತಿ ಅಧ್ಯಕ್ಷೆ ಹರ್ಷಿಣಿ ಪಿ., ಅಮ್ಮುಂಜೆ ಪಂಚಾಯಿತಿ ಸದಸ್ಯ ಕಾರ್ತಿಕ್ ಬಳ್ಳಾಲ್, ಪ್ರಮುಖರಾದ ರಮಾನಾಥ ರಾಯಿ, ಕಿಶೋರ್ ಪಲ್ಲಿಪಾಡಿ, ಚಂದ್ರಶೇಖರ ಬಡಕಬೈಲು, ಅಶೋಕ್ ಬಡಕಬೈಲು, ಸುಬ್ರಾಯ ಕಾರಂತ, ಶುಭಕರ ಶೆಟ್ಟಿ, ರೋಶನ್ ಪಲ್ಲಿಪಾಡಿ, ಬಂಟ್ವಾಳ ಸಹಾಯಕ ಕೃಷಿ ನಿರ್ದೇಶಕ ನಂದನ್ ಶೆಣೈ, ಕೃಷಿ ಅಧಿಕಾರಿ ಬಿ. ಬಿ. ಅನಗವಾಡಿ ಮತ್ತಿತರರು ಉಪಸ್ಥಿತರಿದ್ದರು.