ಶ್ರೀ ರಾಜರಾಜೇಶ್ವರಿ ಕ್ಷೇತ್ರದ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ

rajeshwari
Published on

ಮಡಿಕೇರಿ:

ಮಡಿಕೇರಿ ನಗರದ ಶಕ್ತಿ ಪೀಠಗಳಲ್ಲಿ ಒಂದಾದ ಮಂಗಳಾದೇವಿ ನಗರದ ಶ್ರೀ ರಾಜರಾಜೇಶ್ವರಿ ಕ್ಷೇತ್ರದ ಪುನರ್ ಪ್ರತಿಷ್ಠಾ ವಾರ್ಷಿಕೋತ್ಸವ ಶ್ರದ್ಧಾಭಕ್ತಿಯಿಂದ ಬುಧವಾರ ನಡೆಯಿತು.

ಜ.೧೪ರ ಸಂಜೆಯಿAದಲೇ ಪ್ರಾರ್ಥನೆ, ಪುಣ್ಯ, ಸಪ್ತಶುದ್ಧಿ, ಪ್ರಸಾದ ಶುದ್ಧಿ, ರಾಕ್ಷೋಘ್ನ ಹೋಮ, ವಾಸ್ತು ಪೂಜೆ, ವಾಸ್ತು ಹೋಮ, ದಿಶಾ ಬಲಿ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ವಿಧಿವಿಧಾನಗಳು ನೆರವೇರಿತು.

ಮುಂಜಾನೆ ಪುಣ್ಯಾಹ, ಗಣಪತಿ ಹೋಮ, ಚಂಡಿಕಾ ಹೋಮ, ನವಕಲಶ ಪೂಜೆ, ಪ್ರಧಾನ ಹೋಮ, ನಾಗದೇವರಿಗೆ ತಂಬಿಲ, ಆಶ್ಲೇಷ ಬಲಿ, ಕಲಶಾಭಿಷೇಕ ಜರುಗಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನೆರವೇರಿತು.

ಸಂಜೆ ಸಾಯಂಪೂಜೆ, ರಂಜಪೂಜೆ, ದೇವಾಲಯದ ಆವರಣದಲ್ಲಿ ಬಲಿ ಉತ್ಸವ, ರಾಜಾಂಗಣ ಪ್ರಸಾದ, ಪೀಠ ಪೂಜೆ, ಶುದ್ಧಿ ಕಲಶಾಭಿಶೇಕ, ಮಂತ್ರಾಕ್ಷತೆ ಹಾಗೂ ಅನ್ನಸಂತರ್ಪಣೆ ನಡೆಯಿತು. ನಗರದ ವಿವಿಧೆಡೆಯಿಂದ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ವಿಶೇಷ ಪೂಜೆ, ಪ್ರಾರ್ಥನೆ ಸಲ್ಲಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net