ಮಾಹಿತಿ ತಂತ್ರಜ್ಞಾನ ಅಭಿವೃದ್ಧಿಗೆ ಅಡಿಪಾಯ ಹಾಕಿದ ರಾಜೀವ್ ಗಾಂಧಿ

nrp c
ಬಾಳೆ ಗ್ರಾಪಂ ಮತ್ತಿಮರ ಗ್ರಾಮದಲ್ಲಿ ರಾಜೀವ್ ಗಾಂಧಿ ಹಾಗೂ ದೇವರಾಜ ಅರಸು ಜನ್ಮ ದಿನಾಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್, ಪಿ.ಆರ್.ಸದಾಶಿವ, ಬಿ.ಎಸ್.ಸುಬ್ರಹ್ಮಣ್ಯ, ಸುಶೀಲಮ್ಮ ಇತರರಿದ್ದರು.
Published on

ಎನ್.ಆರ್.ಪುರ: ಮಾಹಿತಿ ತಂತ್ರಜ್ಞಾನದ ಅಭಿವೃದ್ಧಿಗೆ ಅಡಿಪಾಯ ಹಾಕಿದ ಶ್ರೇಯಸ್ಸು ರಾಜೀವ್ ಗಾಂಧಿ ಅವರಿಗೆ ಸಲ್ಲುತ್ತದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್ ತಿಳಿಸಿದರು.

ಬಾಳೆ ಗ್ರಾಪಂ ಮತ್ತಿಮರ ಗ್ರಾಮದ ಸಮೀಪ ಬಾಳೆ ಬೂತ್ ಅಧ್ಯಕ್ಷ ಕ್ಸೇವಿಯಾರ್ ಅವರ ಮನೆಯಂಗಳದಲ್ಲಿ ಭಾನುವಾರ ಮಾಜಿ ಪ್ರಧಾನಮಂತ್ರಿ ರಾಜೀವ್ ಗಾಂಧಿ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಯುವ ಜನರಿಗೆ ಮತದಾನದ ಹಕ್ಕಿನ ವಯಸ್ಸನ್ನು 21 ವರ್ಷದಿಂದ 18ಕ್ಕೆ ಇಳಿಸಿದರು. ದೇವರಾಜ ಅರಸು ಅವರು ಮೀಸಲಾತಿ ಜಾರಿಗೊಳಿಸಿ ಸಾಮಾಜಿಕ ನ್ಯಾಯ ಒದಗಿಸಿದರು ಎಂದು ತಿಳಿಸಿದರು.
ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಂವಿಧಾನಬದ್ಧವಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪಿಸಿದೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಭ್ರಷ್ಟಾಚಾರ ಎಸಗಿದೆ. ಬಿಜೆಪಿ ಮಾಡುವ ಅಪಪ್ರಚಾರಕ್ಕೆ ಕಾರ್ಯಕರ್ತರು ಎದೆಗುಂದಬೇಕಾಗಿಲ್ಲ ಎಂದರು.
ಕೆಪಿಸಿಸಿ ಸದಸ್ಯ ಪಿ.ಆರ್.ಸದಾಶಿವ ಮಾತನಾಡಿ, ರಾಜೀವ್ ಗಾಂಧಿ ಬಡವರ ಬಗ್ಗೆ ಕಾಳಜಿ ಹೊಂದಿ ಸಾಮಾಜಿಕ ನ್ಯಾಯ ಒದಗಿಸುವ ಕಾರ್ಯ ಮಾಡಿದರು. ದೇವರಾಜ ಅರಸು ಹಿಂದುಳಿದವರ್ಗಗಳಿಗೆ, ಅಲ್ಪಸಂಖ್ಯಾತರಿಗೆ ಮೀಸಲಾತಿ ಕಲ್ಪಿಸಿದರು ಎಂದು ಹೇಳಿದರು.
ತಾಲೂಕು ಕಾಂಗ್ರೆಸ್ ಹೋಬಳಿ ಘಟಕದ ಅಧ್ಯಕ್ಷ ಕೆ.ವಿ.ಸಾಜು, ಬಾಳೆ ಪಂಚಾಯತ್ ಘಟಕದ ಅಧ್ಯಕ್ಷ ಮಂಜಪ್ಪ ಮಾತನಾಡಿದರು. ಇತ್ತೀಚೆಗೆ ನ್ಯಾಯಾಲಯದಲ್ಲಿ ಲಾಟರಿ ಮೂಲಕ ಬಾಳೆ ಗ್ರಾಪಂ ಸದಸ್ಯೆಯಾಗಿ ಆಯ್ಕೆಯಾದ ರತ್ನಮ್ಮ ಅವರನ್ನು ಅಭಿನಂದಿಸಲಾಯಿತು.
ಮುಖಂಡರಾದ ಬಿ.ಎಸ್.ಸುಬ್ರಹ್ಮಣ್ಯ, ಕೆ.ಎಂ.ಸುಂದರೇಶ್, ಕೆ.ಎ.ಅಬೂಬಕರ್. ಎಸ್.ಡಿ.ರಾಜೇಂದ್ರ, ಬೆನ್ನಿ, ಸುನಿಲ್‌ಕುಮಾರ್, ಮಾಳೂರು ದಿಣ್ಣೆ ರಮೇಶ್, ಎಚ್.ಎಂ.ಮನು, ಸುಶೀಲಮ್ಮ, ರತನ್ ಗೌಡ, ದೇವಂತ್ ಗೌಡ, ಸೈಯದ್ ಸಫೀರ್ ಅಹಮ್ಮದ್, ರತ್ನಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net