

ಮಮದಾಪುರ: ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳು ತಲುಪಲೆಂದು ರಾಜೀವ ಗಾಂಧಿ ಸೇವಾ ಕೇಂದ್ರ ತೆರೆಯಲಾಗಿದ್ದು, ಸದುಪಯೋಗ ಪಡೆಯಬೇಕೆಂದು ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ಅಮರನಾಥ ಜಾರಕಿಹೊಳಿ ಹೇಳಿದರು. ಸಮೀಪದ ಹಿರೇನಂದಿ ಗ್ರಾಪಂ ಆವರಣದಲ್ಲಿ ನರೇಗಾ ಯೋಜನೆಯಡಿ 16.5 ಲ ರೂ. ವೆಚ್ಚದಲ್ಲಿ ನಿರ್ಮಾಣವಾದ ರಾಜೀವ ಗಾಂಧಿ ಸೇವಾ ಕೇಂದ್ರ ಹಾಗೂ ಕೂಸಿನ ಮನೆ ಕಟ್ಟಡ ಉದ್ಘಾಟನೆ ನೆರವೇರಿಸಿ ಮಾತನಾಡಿದರು. ನರೇಗಾ ಕೂಲಿ ಕಾರ್ಮಿಕರ ಮಕ್ಕಳಿಗಾಗಿ ಪಂಚಾಯತ್ ರಾಜ್ ಇಲಾಖೆಯಿಂದ ಕೂಸಿನ ಮನೆ ನಿರ್ಮಾಣಗೊಂಡಿದ್ದು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು. ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪರಶುರಾಮ ಸ್ತೆ, ಜಿಪಂ ಮಾಜಿ ಸದಸ್ಯರಾದ ಟಿ.ಆರ್.ಕಾಗಲ್, ಮಡ್ಡೆಪ್ಪ ತೋಳಿನವರ, ಸುರೇಶ ಸನದಿ, ಗ್ರಾಪಂ ಅಧ್ಯ ಸಿದ್ದಪ್ಪ ಕೌಜಲಗಿ, ಉಪಾಧ್ಯೆ ರೇಣುಕಾ ಹಾರುಗೊಪ್ಪ, ಪಿಡಿಒ ಮಹಾಂತೇಶ ಪಾಟೀಲ, ಸಿದ್ದಯ್ಯ ಪೂಜೇರಿ ಇತರರಿದ್ದರು.