ಮುಟ್ಟನಹಳ್ಳಿ ವಿವಿಧೋದ್ದೇಶ ಸಹಕಾರ ಸಂಘಕ್ಕೆ ರಾಜಕುಮಾರ್ ಅಧ್ಯಕ್ಷ

ಮುಟ್ಟನಹಳ್ಳಿ ವಿವಿದ್ಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ನೂತನ ಅಧ್ಯಕ್ಷ ಎಂ.ಈ.ರಾಜಕುಮಾರ್ ಅವರನ್ನು ಅಭಿನಂದಿಸಲಾಯಿತು.
ಮುಟ್ಟನಹಳ್ಳಿ ವಿವಿದ್ಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘಕ್ಕೆ ಅವಿರೋಧವಾಗಿ ಆಯ್ಕೆಯಾದ ನೂತನ ಅಧ್ಯಕ್ಷ ಎಂ.ಈ.ರಾಜಕುಮಾರ್ ಅವರನ್ನು ಅಭಿನಂದಿಸಲಾಯಿತು.
Published on

ಕೆ.ಎಂ.ದೊಡ್ಡಿ: ಸಮೀಪದ ಮುಟ್ಟನಹಳ್ಳಿ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಅಧ್ಯಕ್ಷರಾಗಿ ಎಂ.ಈ. ರಾಜಕುಮಾರ್ ಅವಿರೋಧವಾಗಿ ಆಯ್ಕೆಯಾದರು.

ಚಿಕ್ಕನಾಥೇಗೌಡ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನದ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ರಾಜಕುಮಾರ್ ಹೊರತುಪಡಿಸಿ ಬೇರಾರೂ ನಾಮಪತ್ರ ಸಲ್ಲಿಸದ ಕಾರಣ ಚುನಾವಣಾಧಿಕಾರಿ ಸಿ.ಎ.ಸುಧಾಕರ್ ಅವಿರೋಧ ಆಯ್ಕೆ ಘೋಷಿಸಿದರು.

ಅಧ್ಯಕ್ಷ ರಾಜಕುಮಾರ್ ಮಾತನಾಡಿ, ಸಹಕಾರ ಸಂಘಗಳು ರೈತರಿಗೆ ವರದಾನವಾಗಬೇಕು. ಆ ನಿಟ್ಟಿನಲ್ಲಿ ಎಲ್ಲ ನಿರ್ದೇಶಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಾದರಿ ಸಂಘ ಮಾಡಲು ಪಣ ತೊಡಲಾಗುವುದು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಮಧು ಜಿ.ಮಾದೇಗೌಡ ಅವರ ಮಾರ್ಗದರ್ಶನದಲ್ಲಿ ಸಹಕಾರ ಸಂಘವನ್ನು ಅಭಿವೃದ್ಧಿಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನಿಸಲಾಗುವುದು. ರೈತರಿಗೆ ಯಾವುದೇ ರೀತಿ ಅನ್ಯಾಯವಾಗದಂತೆ ಸೌಲಭ್ಯ ನೀಡಲಾಗುವುದು ಎಂದು ಭರವಸೆ ನೀಡಿದರು.

ತಾಪಂ ಮಾಜಿ ಸದಸ್ಯ ಭರತೇಶ್, ಸಂಘದ ಉಪಾಧ್ಯಕ್ಷೆ ಎನ್. ಮಂಜುಳಾ, ನಿರ್ದೇಶಕರಾದ ಎಂ.ಈ.ಮಹೇಂದ್ರ, ಎಂ.ಟಿ. ಅಶೋಕ್, ಎಂ.ಎಚ್.ಪುಟ್ಟಸ್ವಾಮಿ, ಕಲ್ಪನಾ, ವೆಂಕಟಯ್ಯ, ಗೋಪಾಲ್, ಟಿ.ವೆಂಕಟೇಶ್, ಪ್ರಜ್ವಲ್, ಸಿಇಒ ಉಮೇಶ್, ಮುಖಂಡರಾದ ಪುರುಷೋತ್ತಮ್, ಮಂಚೇಗೌಡ, ಗಂಗಾಧರ್, ಪ್ರಕಾಶ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net