ರಾಜಮಾರ್ಗ ಅಗಲೀಕರಣ ಕಾರ್ಯ ಶುರು

web4
ಚನ್ನಮ್ಮನ ಕಿತ್ತೂರು ಪಟ್ಟಣದ ಗುರುವಾರಪೇಟೆ ರಾಜ್ಯಮಾರ್ಗದ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಕಟ್ಟಡ ತೆರವುಗೊಳಿಸುತ್ತಿರುವುದು.
Published on

ಚನ್ನಮ್ಮನ ಕಿತ್ತೂರು: ಪಟ್ಟಣದ ಮುಖ್ಯ ರಾಜಮಾರ್ಗ ಅಗಲೀಕರಣದ ಕಾರ್ಯಾಚರಣೆ ಶನಿವಾರ ಪ್ರಾರಂಭವಾಗಿದೆ. 1992ರಲ್ಲಿ ರಸ್ತೆ ಅಗಲೀಕರಣಕ್ಕೆ ನಿಗದಿಪಡಿಸಿದ್ದ ರಸ್ತೆಯ ಎರಡು ಬದಿಯ ಚರಂಡಿಯವರೆಗೆ ತೆರವು ಕಾರ್ಯಾಚರಣೆ ನಡೆಯಲಿದ್ದು, ಚರಂಡಿ ದಾಟಿ ಬಂದಿರುವ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ.

ಕಾರ್ಯಾಚರಣೆ ಸಂದರ್ಭದಲ್ಲಿ ಮನೆ ಮಾಲೀಕರು ಸಾಮಗ್ರಿ ಸ್ಥಳಾಂತರಿಸಲು ಕಾಲಾವಕಾಶ ನೀಡಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಗಳು ಹಾಗೂ ಸಿಬ್ಬಂದಿಯಿಂದ ಜೆಸಿಬಿ ಬಳಸಿ ಕಾರ್ಯಾಚರಣೆ ನಡೆಸಲಾಯಿತು.

ಇದಕ್ಕೂ ಮೊದಲು ಪಟ್ಟಣ ಪಂಚಾಯಿತಿ ಸಭಾಭವನದಲ್ಲಿ ಗುರುವಾರ ಪಟ್ಟಣದ ರಸ್ತೆ ಅಗಲೀಕರಣದ ಕುರಿತು ನಡೆದ ಸಮಾಲೋಚನೆ ಸಭೆಯಲ್ಲಿ ಮನೆ ಮಾಲೀಕರ ಮನವೊಲಿಸುವ ಕೆಲಸವನ್ನು ಶಾಸಕ ಬಾಬಾಸಾಹೇಬ ಪಾಟೀಲ ಮಾಡಿದ್ದರು. ಇದಕ್ಕೆ ಸಾರ್ವಜನಿಕರು ಸಹ ಸಹಕಾರ ನೀಡುವ ಭರವಸೆ ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net