

ಹುಬ್ಬಳ್ಳಿ: ಇಲ್ಲಿಯ ರಂಭಾಪುರಿ ಕಲ್ಯಾಣ ಮಂಟಪದಲ್ಲಿ ಮಂಗಳವಾರ ಏರ್ಪಡಿಸಿದ್ದ ಶ್ರೇಯಾ ಜನ ಸೇವಾ ಫೌಂಡೇಷನ್ 4ನೇ ವಾರ್ಷಿಕೋತ್ಸವ ಹಾಗೂ ಬಿ.ಜಿ. ಪಾಟೀಲ ಅವರ 61ನೇ ಜನ್ಮದಿನ ಕಾರ್ಯಕ್ರಮದಲ್ಲಿ ಸರ್ವಧರ್ಮ ಸಮಾಜ ಸೇವಕ ಡಾ. ರಮೇಶ ಮಹಾದೇವಪ್ಪನವರಿಗೆ ರಾಜರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷ ಶಾಂತಣ್ಣ ಕಡಿವಾಲ, ಬಿ.ಜಿ. ಪಾಟೀಲ, ಸಂತೋಷ್ ಶೆಟ್ಟಿ, ಚನ್ನಬಸಪ್ಪ ಧಾರವಾಡಶೆಟ್ಟರ್ ಹಾಗೂ ಇತರರು ಉಪಸ್ಥಿತರಿದ್ದರು.