ಆ.11ರಂದು ರಾಜ್ಯಸಭಾ ಸದಸ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಕಚೇರಿ ಉದ್ಘಾಟನೆ

veerendra heggade
Published on

ಬೆಳ್ತಂಗಡಿ: ರಾಜ್ಯಸಭಾ ನಾಮನಿರ್ದೇಶಿತ ಸದಸ್ಯ ಡಾ.ವೀರೇಂದ್ರ ಹೆಗ್ಗಡೆ ಅವರ ನೂತನ ಕಚೇರಿ ಆಗಸ್ಟ್ 11ರಂದು ಬೆಳಗ್ಗೆ 10 ಗಂಟೆಗೆ ಧರ್ಮಸ್ಥಳದ ಮಂಜೂಷಾ ವಸ್ತುಸಂಗ್ರಹಾಲಯ ಬಳಿ ಇರುವ ಕಟ್ಟಡದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದು ಸಂಸದರ ಆಪ್ತ ಕಾರ್ಯದರ್ಶಿ ಕೆ.ಎನ್ ಜನಾರ್ದನ್ ಮತ್ತು ಡಾ.ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ತಿಳಿಸಿದ್ದಾರೆ.

ಶಾಸಕ ಹರೀಶ್ ಪೂಂಜ ನೂತನ ಕಾರ್ಯಾಲಯ ಉದ್ಘಾಟಿಸಲಿದ್ದು, ಡಾ.ಡಿ.ವೀರೇಂದ್ರ ಹೆಗ್ಗಡೆ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಸಿಂಹ ನಾಯಕ್ ಮತ್ತು ಕೆ.ಹರೀಶ್ ಕುಮಾರ್, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಿ. ಹರ್ಷೇಂದ್ರ ಕುಮಾರ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net