ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ರಾಜ್ಯಸಭಾ ಸದಸ್ಯರ ಅಧಿಕೃತ ಕಾರ್ಯಾಲಯ ಉದ್ಘಾಟನೆ

IMG-20220811-WA0003
Published on

ಬೆಳ್ತಂಗಡಿ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡು ಪ್ರಮಾಣವಚನ ಸ್ವೀಕರಿಸಿ ಈಗಾಗಲೆ ಎರಡು ಅಧಿವೇಶನಗಳಲ್ಲಿ ಭಾಗವಹಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು (ಸಂಸದರ) ನೂತನ ಕಾರ್ಯಾಲಯ ಗುರುವಾರ ಧರ್ಮಸ್ಥಳದ ಮಂಜುಷಾ ವಸ್ತುಸಂಗ್ರಹಾಲಯದ ಬಳಿ ಇರುವ ಕಟ್ಟಡದಲ್ಲಿ ಶುಭಾರಂಭಗೊಂಡಿತು.

ಶಾಸಕ ಹರೀಶ್ ಪೂಂಜ ಕಚೇರಿಯನ್ನು ದೀಪ ಬೆಳಗಿ ಉದ್ಘಾಟಿಸಿದರು.

ಈ ವೇಳೆ ವಿಧಾನ ಪರಿಷತ್ ಸದಸ್ಯ ಕೆ. ಪ್ರತಾಪಸಿಂಹ ನಾಯಕ್, ಕೆ.ಹರೀಶ್ ಕುಮಾರ್, ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್, ಸುಪ್ರಿಯಾ ಹರ್ಷೇಂದ್ರ ಕುಮಾರ್, ಸಂಸದರ ಆಪ್ತ ಕಾರ್ಯದರ್ಶಿ ಕೆ.ಎನ್ ಜನಾರ್ದನ್ ಮತ್ತು ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ ಉಪಸ್ಥಿತರಿದ್ದರು.

ಬಳಿಕ ವಸಂತ ಮಹಲ್ ನಲ್ಲಿ ಸಭಾ ಕಾರ್ಯಕ್ರಮ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net