

ಬೆಂಗಳೂರು: ರಾಜ್ಯಸಭೆಯ ಒಂದು ಸ್ಥಾನಕ್ಕೆ ಉಪ ಚುನಾವಣೆಗಾಗಿ ಬುಧವಾರ ಅಧಿಸೂಚನೆ ಹೊರ ಬೀಳಲಿದೆ. ರಾಜ್ಯಸಭೆ ಸದಸ್ಯರಾಗಿದ್ದ ಅಶೋಕ್ ಗಸ್ತಿ ನಿಧನದಿಂದ ಈ ಉಪ ಚುನಾವಣೆ ನಡೆಯುತ್ತಿದೆ.
ವಿಧಾನಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಚುನಾವಣಾಧಿಕಾರಿಯಾಗಿದ್ದು, ಉಪ ಕಾರ್ಯದರ್ಶಿ ವಿ.ಮೋಹನಮೂರ್ತಿ ಸಹಾಯಕ ಚುನಾವಣಾಧಿಕಾರಿಯಾಗಿ ನೇಮಕವಾಗಿದ್ದಾರೆ. ನಾಮಪತ್ರ ಸಲ್ಲಿಕೆ - ನ.11 ರಿಂದ 18ರವರೆಗೆ ( ಸಾರ್ವಜನಿಕ ರಜಾ ದಿನ ಹೊರತುಪಡಿಸಿ) ನಾಮಪತ್ರಗಳ ಪರಿಶೀಲನೆ- ನ.19ರ ಬೆಳಗ್ಗೆ 11ಕ್ಕೆ , ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನಾಂಕ - ನ.23
ಅಗತ್ಯಬಿದ್ದರೆ ಡಿ.1ರಂದು ಬೆಳಗ್ಗೆ 9 ರಿಂದ ಸಂಜೆ 4ರವರೆಗೆ ವಿಧಾನ ಸೌಧದ ಮೊದಲನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 106ರಲ್ಲಿ ಮತದಾನ ನಡೆಯಲಿದೆ.