ಮಹೇಶ ಕಾಲೇಜಿನಲ್ಲಿ ರಾಜ್ಯೋತ್ಸವ ಕವಿಗೋಷ್ಠಿ

Published on

ಹುಬ್ಬಳ್ಳಿ: ನಗರದ ಡಾ. ಆರ್.ಬಿ. ಪಾಟೀಲ್ ಮಹೇಶ ಪಿಯು ಕಾಲೇಜಿನಲ್ಲಿ ಇತ್ತೀಚೆಗೆ ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮ ಹಾಗೂ 69ನೇ ರಾಜ್ಯೋತ್ಸವ ಅಂಗವಾಗಿ ವಿಶೇಷ ಕವಿಗೋಷ್ಠಿ ಹಮ್ಮಿಕೊಳ್ಳಲಾಗಿತ್ತು.

ಉದಯೋನ್ಮುಖ 13 ಕವಿಗಳು ಭಾಗವಹಿಸಿದ್ದರು.
ರಾಜ್ಯೋತ್ಸವ ನಿಮಿತ್ತ ವಿದ್ಯಾರ್ಥಿಗಳಿಗೆ ಸ್ವ ರಚಿತ ಕವನ ವಾಚನ, ನಾಡಿನ ಪ್ರಮುಖ ಕವಿಗಳ ಅದ್ಭುತ ಗೀತೆಗಳ ಗಾಯನ, ಪ್ರಬಂಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಸ್ಪರ್ಧೆಯಲ್ಲಿ ವಿಜೇತರಿಗೆ ಪ್ರಥಮ, ದ್ವೀತಿಯ ಮತ್ತು ತೃತೀಯ ಪ್ರಶಸ್ತಿ ಹಾಗೂ ಬಹುಮಾನ ವಿತರಣೆ ಮಾಡಲಾಯಿತು. ಕವಿಗೋಷ್ಠಿಯಲ್ಲಿ ಭಾಗವಹಿಸಿದ ಎಲ್ಲ ಕವಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು.

ಗೋಕುಲದ ಸರ್ಕಾರಿ ಪಪೂ ಕಾಲೇಜಿನ ಪ್ರಾಚಾರ್ಯ ಎಫ್.ಬಿ. ಸೊರಟೂರ ಅತಿಥಿಗಳಾಗಿ ಭಾಗವಹಿಸಿ, ಎಲ್ಲಾದರೂ ಇರು ಎಂಥಾದರೂ ಇರು… ಎಂಬ ಕವಿಯ ಆಶಯವನ್ನು ಅತ್ಯಂತ ಪ್ರೇರಣಾತ್ಮಕ ವಿಚಾರಗಳಿಂದ ವಿವರಿಸಿದರು.

ಡಾ. ಆರ್.ಬಿ. ಪಾಟೀಲ್ ಮಹೇಶ ಪಪೂ ಕಾಲೇಜಿನ ಪ್ರಾಚಾರ್ಯ ರಾಮಮೋಹನ್ ಎಚ್.ಕೆ. ಮಾತನಾಡಿ, ಕನ್ನಡವನ್ನು ಉಳಿಸಿ ಬೆಳೆಸುವ ಕಾರ್ಯದಲ್ಲಿ ಎಲ್ಲರೂ ಕೈಜೋಡಿಸಬೇಕು ಎಂದರು.

ಉಪಪ್ರಾಚಾರ್ಯ ರಮೇಶ ಹೊಂಬಾಳೆ ಉಪಸ್ಥಿತರಿದ್ದರು.

ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಐ.ಎಸ್. ಹಿರೇಮಠ ಕಾರ್ಯಕ್ರಮ ಸಂಟಿಸಿ ನಿರೂಪಿಸಿದರು. ಉಪನ್ಯಾಸಕ ದ್ಯಾಮಣ್ಣ ಚೌಡಾಳ ನಿರ್ವಹಿಸಿದರು. ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net