ಕನ್ನಡ ರಾಜ್ಯೋತ್ಸವ ನಮ್ಮೆಲ್ಲರ ನಿತ್ಯೋತ್ಸವವಾಗಬೇಕು

rajyotsava
Published on

ಮಡಿಕೇರಿ:

ಕನ್ನಡ, ಕರ್ನಾಟಕ, ಕರುನಾಡು ಎಂಬುದು ಕೇವಲ ಬರೀ ನೆಲ ಮತ್ತು ಭಾಷೆಯಲ್ಲ. ಅದೊಂದು ಕನ್ನಡಿಗರ ಭಾವನೆ ಮತ್ತು ಬಾಂಧವ್ಯವಾಗಿದೆ. ಕನ್ನಡ ರಾಜ್ಯೋತ್ಸವ ನಮ್ಮೆಲ್ಲರ ನಿತ್ಯೋತ್ಸವವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಎಸ್. ಬೋಸರಾಜು ಹೇಳಿದರು. ಕೊಡಗು ಜಿಲ್ಲಾಡಳಿತ ವತಿಯಿಂದ ಇಲ್ಲಿನ ಪೊಲೀಸ್ ಕವಾಯತು ಮೈದಾನದಲ್ಲಿ ಶನಿವಾರ ಏರ್ಪಡಿಸಿದ್ದ 70ನೇ ಕನ್ನಡ ರಾಜ್ಯೋತ್ಸವ ದಿನಾಚರಣೆಯಲ್ಲಿ ಧ್ಬಜಾರೋಹಣ ನೆರವೇರಿಸಿ ಮಾತನಾಡಿದರು.

ದೇಶದಲ್ಲಿ ಕನ್ನಡ ಭಾಷೆಗೆ ಹೆಚ್ಚು ಜ್ಞಾನಪೀಠ ಪ್ರಶಸ್ತಿ ದೊರೆತಿರುವುದು ವಿಶೇಷವೇ ಸರಿ. ಇಂದು ಹೆಮ್ಮೆಯಿಂದ ಆಚರಿಸುತ್ತಿರುವ ಕನ್ನಡ ರಾಜ್ಯೋತ್ಸವದ ಹಿಂದೆ ನಮ್ಮ ನಾಡಿನ ಏಕೀಕರಣಕ್ಕಾಗಿ ಶ್ರಮಿಸಿದ ಮಹನೀಯರ ಹೋರಾಟವಿದೆ. ಸಹಸ್ರಾರು ಜನ ಕನ್ನಡಿಗರು ಆಡಳಿತಾತ್ಮಕ ಹಾಗೂ ಭಾವನಾತ್ಮಕ ಐಕ್ಯತೆಗಾಗಿ ಹಗಲಿರುಳು ದುಡಿದಿದ್ದಾರೆ. ಅಂತಹ ಎಲ್ಲಾ ಮಹಾನ್ ಚೇತನರನ್ನು ಅತ್ಯಂತ ಕೃತಜ್ಞತೆಯಿಂದ ಸ್ಮರಿಸುವುದು ಅಗತ್ಯವಾಗಿದೆ. ಯುವ ಜನರು ಕನ್ನಡ ನಾಡು-ನುಡಿ, ಸಾಹಿತ್ಯ, ಸಂಸ್ಕೃತಿ ಹಾಗೂ ಕಲೆಯ ಬಗೆಗೆ ಅಭಿರುಚಿ ಬೆಳೆಸಿಕೊಳ್ಳುವ ಮೂಲಕ ನಮ್ಮ ಶ್ರೀಮಂತ ಪರಂಪರೆಯ ನೈಜ ವಾರಸುದಾರರಾಗಿ ಕನ್ನಡತನವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಕವಿ ಗೋಪಾಲಕೃಷ್ಣ ಅಡಿಗರ ಕಟ್ಟುವೆವು ನಾವು ಹೊಸ ನಾಡೊಂದನು ರಸದ ಬೀಡೊಂದನು ಎನ್ನುವ ಮಾತಿನಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಡಗು ಜಿಲ್ಲೆ ಮತ್ತು ಕನ್ನಡ ನಾಡಿನ ಅಭಿವೃದ್ಧಿಗೆ ಸಾಕಷ್ಟು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಕನ್ನಡ ನಾಡು-ನುಡಿಗೆ ಹೆಚ್ಚಿನ ಆದ್ಯತೆ ನೀಡಿರುವುದು ವಿಶೇಷವಾಗಿದೆ.

ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಎರಡೂವರೆ ವರ್ಷ ಪೂರ್ಣಗೊಳ್ಳುತ್ತಿದ್ದು, ಹಲವು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಎಲ್ಲಾ ಜನರ ಮನ ಗೆದ್ದಿದೆ. ಕೊಡಗು ಜಿಲ್ಲೆಯಲ್ಲಿ ಒಟ್ಟು 1,40,28,793 ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ 1,17,085 ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳು ನೊಂದಾಯಿಸಿಕೊAಡಿದ್ದು, 465.02 ಕೋಟಿ ರೂ. ಹಣ ಮಹಿಳೆಯರ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗಿದೆ. 1,98,841 ಗ್ರಾಹಕರು ಗೃಹಜ್ಯೋತಿ ಯೋಜನೆಯಡಿ ಹೆಸರು ನೋಂದಾಯಿಸಿ ಕೊಂಡಿದ್ದು, ಶೇ.99.09 ರಷ್ಟು ಪ್ರಗತಿ ಸಾಧಿಸಲಾಗಿದೆ. 1,08,602 ಪಡಿತರ ಚೀಟಿ ಕುಟುಂಬಗಳು ಅನ್ನಭಾಗ್ಯ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ. ಯುವನಿಧಿ ಯೋಜನೆಯಡಿಯಲ್ಲಿ ಅ. 23 ರವರೆಗೆ ಒಟ್ಟು 1912 ಅಭ್ಯರ್ಥಿಗಳು ನೋಂದಾಯಿಸಿಕೊAಡಿದ್ದು, 2025ರ ಜುಲೈನಲ್ಲಿ 1445 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮುಖಾಂತರ ಒಟ್ಟು 2,35,38,000 ರೂ. ಹಣ ಸಂದಾಯವಾಗಿದೆ.

ಗ್ಯಾರAಟಿ ಯೋಜನೆಗಳ ಜತೆಗೆ ಸರ್ಕಾರ ವಿವಿಧ ಅಭಿವೃದ್ಧಿ ಕಾರ್ಯಗಳು ಎಂದಿನAತೆ ನಡೆಯುತ್ತಿವೆ. ಆ ದಿಸೆಯಲ್ಲಿ ವಿವಿಧ ಇಲಾಖೆಗಳ ಮೂಲಕ ಮೂಲ ಸೌಲಭ್ಯ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ಲೋಕೋಪಯೋಗಿ ಇಲಾಖೆ ಮೂಲಕ ಮಡಿಕೇರಿ ಮತ್ತು ವಿರಾಜಪೇಟೆ ಕ್ಷೇತ್ರದಲ್ಲಿ ಸಂಕ ನಿರ್ಮಾಣ ಕಾಮಗಾರಿಗಳನ್ನು ಕೈಗೊಳ್ಳಲು 2 ಕೋಟಿ ರೂ. ಅನುದಾನ ಒದಗಿಸಲಾಗಿದೆ. ರಾಜ್ಯ ಹೆದ್ದಾರಿ ರಸ್ತೆಗಳಿಗೆ 74.41 ಕೋಟಿ, ಜಿಲ್ಲಾ ಮುಖ್ಯ ರಸ್ತೆಗಳ ಅಭಿವೃದ್ದಿಗಾಗಿ 141.53 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ.

ಮಡಿಕೇರಿ ನಗರದಲ್ಲಿ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ಬಾಲಕರ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯದ ಸ್ವಂತ ಕಟ್ಟಡ ನಿರ್ಮಾಣಕ್ಕೆ ಜಿಲ್ಲಾಡಳಿತದ ವತಿಯಿಂದ 2.10 ಎಕರೆ ಜಾಗ ಕಾಯ್ದಿರಿಸಿದ್ದು, ಈ ಜಾಗಗಳಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ನೂತನ ಕಟ್ಟಡಗಳನ್ನು ನಿರ್ಮಿಸಲಾಗುವುದು. ಜಿಲ್ಲೆಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ನಡೆದ ಸರ್ವೇ ಕಾರ್ಯದಲ್ಲಿ ಶೇ.96.30 ರಷ್ಟು ಪ್ರಗತಿ ಸಾಧಿಸಲಾಗಿದೆ.

ನಗರ ಭೂ ಸಾರಿಗೆ ನಿರ್ದೇಶನಾಲಯದಿಂದ ಮಡಿಕೇರಿ ನಗರಸಭೆ ವ್ಯಾಪ್ತಿಯ ಜಿ.ಟಿ. ರಸ್ತೆಯಲ್ಲಿ ಪಾದಚಾರಿ ಮಾರ್ಗ ನಿರ್ಮಾಣ ಕಾಮಗಾರಿ ವೆಚ್ಚ 3.28 ಕೋಟಿ ರೂ., ಕುಶಾಲನಗರದ ಬಿ.ಎಂ.ರಸ್ತೆಯ ಪಾದಚಾರಿ ಮಾರ್ಗ ಅಭಿವೃದ್ದಿ ಕಾಮಗಾರಿ ಅನುಷ್ಠಾನಕ್ಕೆ 5.37 ಕೋಟಿ ರೂ. ಸೇರಿ ಒಟ್ಟು 12.02 ಕೋಟಿ ರೂ. ಅನುದಾನ ಹಂಚಿಕೆ ಮಾಡಲಾಗಿದೆ. ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ ಸುಮಾರು 95 ಕೋಟಿ ರೂ. ವೆಚ್ಚದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳು ಶೀಘ್ರ ಚಾಲನೆಗೊಳ್ಳಲಿದೆ. 12.26 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಮಡಿಕೇರಿಯಲ್ಲಿ ನಿರ್ಮಿಸಲಾಗುತ್ತಿರುವ ಉಪ-ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ತಾರಾಲಯದ ಕಾಮಗಾರಿ ಪ್ರಗತಿಯಲ್ಲಿದೆ.

ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ 10 ಕೋಟಿ ರೂ. ಅನುದಾನ ಲಭ್ಯವಿದೆ. ಈ ವರ್ಷ 3 ಮಾನª Àಹಾನಿ ಸಂಭವಿಸಿದ್ದು, ತಲಾ 5 ಲಕ್ಷ ರೂ. ಪರಿಹಾರ ಸಂಬAಧಪಟ್ಟವರಿಗೆ ಪಾವತಿಸಲಾಗಿದೆ. 52 ಮನೆಗಳು ಪೂರ್ಣ ಹಾನಿಯಾಗಿದೆ. 194 ಮನೆಗಳು ತೀವ್ರಹಾನಿ ಹಾಗೂ 88 ಮನೆಗಳು ಭಾಗಶಃ ಹಾನಿಯಾಗಿವೆ. ಮಳೆಯಿಂದಾಗಿ ಜಿಲ್ಲೆಯಲ್ಲಿ 28 ಜಾನುವಾರುಗಳಿಗೆ ಹಾನಿಯಾಗಿದ್ದು ಸಂಬAಧಪಟ್ಟವರಿಗೆ ಅಗತ್ಯ ಪರಿಹಾರ ಪಾವತಿಸಲಾಗಿದೆ ಎಂದು ಮಾಹಿತಿ ನೀಡಿದರು.

ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ, ತಾಲೂಕು ಅಧ್ಯಕ್ಷ ಮಂದ್ರಿರ ಮೋಹನ್ ದಾಸ್, ಕಸಪಾ ಅಧ್ಯಕ್ಷ ಕೇಶವ ಕಾಮತ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಎಸ್.ಪಿ. ಕೆ. ರಾಮರಾಜನ್, ಜಿ.ಪಂ. ಸಿಇಒ ಆನಂದ್ ಪ್ರಕಾಶ್ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ ಮತ್ತಿತರರು ಇದ್ದರು.

ಸಭಾ ಕಾರ್ಯಕ್ರಮಕ್ಕೂ ಮೊದಲು ಆಕರ್ಷಕ ಪಥಸಂಚಲನ ನಡೆಯಿತು. ಜಿಲ್ಲಾ ಶಸಸ್ತç ಮೀಸಲು ಪೊಲೀಸ್, ಮಡಿಕೇರಿ ಉಪವಿಭಾಗದ ನಾಗರಿಕ ಪೊಲೀಸ್, ವಿರಾಜಪೇಟೆ ಮತ್ತು ಸೋಮವಾರಪೇಟೆ ನಾಗರಿಕ ಪೊಲೀಸ್, ಗೃಹರಕ್ಷಕ ದಳ, ಅರಣ್ಯ ಇಲಾಖೆ, ಎಫ್‌ಎಂಸಿ ಕಾಲೇಜು ಎನ್‌ಸಿಸಿ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ತಂಡಗಳು ಪಥಸಂಚಲನದಲ್ಲಿ ಭಾಗವಹಿಸಿದ್ದವು. ಮಡಿಕೇರಿ ಬಾಲಕರ ಬಾಲಮಂದಿರ, ಸಂತ ಜೋಸೆಫರ ಸಂಯುಕ್ತ ಪ್ರೌಢಶಾಲೆ, ಸಂತ ಮೈಕಲರ ಪ್ರೌಢ ಶಾಲೆ, ಕ್ರೆಸೆಂಟ್ ಶಾಲೆ, ಬಾಲಕಿಯರ ಬಾಲ ಮಂದಿರ, ಬ್ಲಾಸಂ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆ ಹಾಗೂ ಕೊಡಗು ವಿದ್ಯಾಲಯ ಮಕ್ಕಳು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಇದೇ ವೇಳೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಕನ್ನಡದಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದಕ್ಕೂ ಮುನ್ನ ಸ್ತಬ್ಧ ಚಿತ್ರಗಳ ಮೆರವಣಿಗೆ ನಡೆಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net