ಶ್ರೀ ಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ರಾಜ್ಯೋತ್ಸವ ಸಂಭ್ರಮ

6
Published on

ಮೈಸೂರು: ನಗರದ ಶ್ರೀಗಣಪತಿ ಸಚ್ಚಿದಾನಂದ ಆಶ್ರಮದಲ್ಲಿ ಶುಕ್ರವಾರ 69ನೇ ರಾಜ್ಯೋತ್ಸವ ಆಚರಣೆ ಮತ್ತು ಗಣ್ಯರ ಅಭಿನಂದನೆ ಆಯೋಜಿಸಲಾಗಿತ್ತು.

ಶ್ರೀಗಣಪತಿ ಸಚ್ಚಿದಾನಂದ ಸ್ವಾಮೀಜಿ ಆಶೀರ್ವಚನ ನೀಡಿ, ಕನ್ನಡ ಭಾಷೆ ಅತ್ಯಂತ ಸುಲಭ ಭಾಷೆ. ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ದೊರೆತಿದೆ. ರಾಜ್ಯೋತ್ಸವದ ಸಂದರ್ಭದಲ್ಲಿ ಕನ್ನಡ ಪುಸ್ತಕಗಳನ್ನು ಗಣ್ಯರಿಗೆ ನೀಡಬೇಕು. ಕನ್ನಡ ಪತ್ರಿಕೆ ಹಾಗೂ ಪುಸ್ತಕಗಳನ್ನು ಕನ್ನಡಿಗರು ಕೊಂಡು ಓದಬೇಕು ಎಂದು ಕೋರಿದರು.

ಮೈಸೂರು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ ಕೆ.ಬಿ.ಲಿಂಗರಾಜು ಅವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಶ್ರೀಗಣಪತಿ ಸಚ್ಚಿದಾನಂದ ಸ್ವಾಮೀಜಿ ಹಾಗೂ ಶ್ರೀದತ್ತ ವಿಜಯಾನಂದತೀರ್ಥ ಸ್ವಾಮೀಜಿ ಅವರಿಗೆ ಗುರುವಂದನೆ ಮಾಡಲಾಯಿತು.

ಹಿರಿಯ ಸಮಾಜ ಸೇವಕ ಕೆ.ರಘುರಾಂ ವಾಜಪೇಯಿ, ಉದ್ಯಮಿ ನಾಗೇಶ್ ಕಾಡಯ್ಯ, ಶ್ರೀರಾಘವೇಂದ್ರ ಪ್ರತಿಷ್ಠಾನದ ಅಧ್ಯಕ್ಷ ಎಸ್.ನಾಗರಾಜ, ಸಮಾಜ ಸೇವಕ ರಾಜೇಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net