

ಕಡಬ: ಶ್ರೀ ರಾಮಕುಂಜೇಶ್ವರ ಆಂಗ್ಲ ಮಾಧ್ಯಮ ವಸತಿ ನಿಲಯದಲ್ಲಿ ಕಸಾಪ ಕಡಬ ತಾಲೂಕು ಘಟಕದ ಅಧ್ಯಕ್ಷ ಕೆ.ಸೇಸಪ್ಪ ರೈ ಧ್ವಜಾರೋಹಣಗೈದರು.
ಕಡಬ ಹೋಬಳಿಯ ಅಧ್ಯಕ್ಷ ಪದ್ಮಪ್ಪಗೌಡ ಕನ್ನಡ ಧ್ವಜಾರೋಹಣ ನೆರವೇರಿಸಿದರು. ಸಂಸ್ಥೆಯ ಆಡಳಿತಾಧಿಕಾರಿ ಆನಂದ್ ಎಸ್.ಟಿ. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಹರೀಶ್ ಬಾರಿಂಜ ಮಾತನಾಡಿದರು.
ಗಂಡಿಬಾಗಿಲು ಅಂಗನವಾಡಿ ಕಾರ್ಯಕರ್ತೆ ಮೋಹಿನಿ ಯು, ಮೇಲೂರು ಅಂಗನವಾಡಿ ಕಾರ್ಯಕರ್ತೆ ಪ್ರಫುಲ್ಲ ಅವರನ್ನು ಸನ್ಮಾನಿಸಲಾಯಿತು. ಕನ್ನಡ ಸಾಹಿತ್ಯ ಪರಿಷತ್ ಕಡಬ ತಾಲೂಕು ಘಟಕ ಕಾರ್ಯದರ್ಶಿ ಬಾಲಚಂದ್ರ ಮುಚ್ಚಿಂತಾಯ, ಪುರುಷೋತ್ತಮ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ಲೋಹಿತ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಾದ ಲಿಖಿತ್ ಗೌಡ, ಜನನಿ ಮತ್ತು ಶಿಕ್ಷಕಿ ಹರಿಣಿ ಕನ್ನಡ ನಾಡು-ನುಡಿಯ ಮಹತ್ವದ ಬಗ್ಗೆ ಮಾತನಾಡಿದರು. ವಿದ್ಯಾರ್ಥಿಗಳಿಂದ ಕನ್ನಡ ನಾಡು-ನುಡಿ ಬಿಂಬಿಸುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಮುಖ್ಯಶಿಕ್ಷಕಿ ಗಾಯತ್ರಿ ಯು.ಎನ್. ಸ್ವಾಗತಿಸಿದರು. ಶಿಕ್ಷಕಿ ತೃಪ್ತಿ ವಂದಿಸಿದರು. ಶಿಕ್ಷಕ ಹರೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿದರು.