ಖಾಸಗಿ ಶಾಲೆಯಲ್ಲಿ ರಾಖಿ ಗಲಾಟೆ

31sgr3
ಪರಿಸ್ಥಿತಿ ತಿಳಿಗೊಳಿಸುತ್ತಿರುವ ಪೊಲೀಸರು.
Published on

ಸಾಗರ: ನಗರದ ಖಾಸಗಿ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಗುರುವಾರ ರಕ್ಷಾಬಂಧನ ಆಚರಣೆಗೆ ಸಂಬಂಧಪಟ್ಟಂತೆ ಮುಖ್ಯ ಶಿಕ್ಷಕರು ಮತ್ತು ಪಾಲಕರ ಮಧ್ಯೆ ವಾಗ್ಯುದ್ಧವಾಗಿದೆ.
ಬುಧವಾರ ರಕ್ಷಾಬಂಧನ ಹಿನ್ನೆಲೆಯಲ್ಲಿ 9ನೇ ತರಗತಿಯಲ್ಲಿ ಮಕ್ಕಳು ರಾಖಿ ಕಟ್ಟಿಕೊಂಡಿದ್ದಾರೆ. ಓರ್ವ ವಿದ್ಯಾರ್ಥಿನಿ ವಿದ್ಯಾಥಿಯೊಬ್ಬನಿಗೆ ರಾಖಿ ಕಟ್ಟಿದ್ದಾಳೆ. ಎಲ್ಲರ ಎದುರಿಗೆ ರಾಖಿ ಕಟ್ಟಿದ್ದರಿಂದ ಉಳಿದ ವಿದ್ಯಾರ್ಥಿಗಳು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದರು. ಇದರಿಂದ ನೊಂದ ವಿದ್ಯಾರ್ಥಿ ಬಾತ್‌ರೂಮ್‌ಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ. ಆಗ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವರ್ಗ ವಿದ್ಯಾರ್ಥಿಯನ್ನು ಸಮಾಧಾನಪಡಿಸಿ ಬಾಲಕನ ಕೈಗೆ ಕಟ್ಟಿದ್ದ ರಾಖಿಯನ್ನು ತೆಗೆಸಿದ್ದಾರೆ. ಜತೆಗೆ ಎಲ್ಲ ವಿದ್ಯಾರ್ಥಿಗಳು ಕಟ್ಟಿಸಿಕೊಂಡ ರಾಖಿಯನ್ನು ಬಿಚ್ಚಿಸಿ ಕಳಿಸಿದ್ದರು. ಆದರೂ ಗುರುವಾರ ಬೆಳಗ್ಗೆ 11 ಗಂಟೆವರೆಗೆ ಮಕ್ಕಳನ್ನು ಹೊರಗೆ ನಿಲ್ಲಿಸುವ ಶಿಕ್ಷೆಯನ್ನು ನೀಡಲಾಗಿತ್ತು.
ಈ ವಿಷಯ ತಿಳಿದ ಪಾಲಕರು ಪಾಲಕರು ಮತ್ತು ಹಿಂದುಪರ ಸಂಘಟನೆಗಳ ಕಾರ್ಯಕರ್ತರು ಶಾಲೆಗೆ ಆಗಮಿಸಿ ರಾಖಿ ಬಿಚ್ಚಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಕೋಮಲ್ ರಾಘವೇಂದ್ರ, ಸಂತೋಷ್, ರಾಘವೇಂದ್ರ ಕಾಮತ್, ಆಟೋ ಗಣೇಶ್, ಕುಮಾರ ಶೆಟ್ಟಿ, ಶ್ರೀಧರ್ ಸಾಗರ್, ಪ್ರತಿಮಾ ಜೋಗಿ, ಕಿರಣ್, ನವೀನ್ ಯಳವರಸಿ, ಗಣೇಶ್ ಇತರರು ಕಟ್ಟಿದ್ದ ರಾಖಿಯನ್ನು ಬಿಚ್ಚಿಸಿದ್ದ ಮುಖ್ಯಶಿಕ್ಷಕಿ ಮತ್ತು ಶಿಕ್ಷಕ ವರ್ಗವನ್ನು ತರಾಟೆಗೆ ತೆಗೆದುಕೊಂಡರು.
ಸ್ಥಳಕ್ಕೆ ಡಿವೈಎಸ್‌ಪಿ ಗೋಪಾಲಕೃಷ್ಣ ನಾಯ್ಕ, ಸಿಪಿಐ ಸೀತಾರಾಮ್, ಕೃಷ್ಣಪ್ಪ, ತಹಸೀಲ್ದಾರ್ ಚಂದ್ರಶೇಖರ ನಾಯ್ಕ, ಶಿಕ್ಷಣ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು. ಮುಖ್ಯಶಿಕ್ಷಕಿ ರಾಖಿ ತೆಗೆಸಿದಕ್ಕೆ ಕ್ಷಮೆ ಕೋರಿದ ಹಿನ್ನೆಲೆಯಲ್ಲಿ ಘಟನೆಯನ್ನು ಸಮಾಪ್ತಿಗೊಳಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net