ರಕ್ಷಾ ಬಂಧನದಿಂದ ಸಂಬಂಧ ಗಟ್ಟಿ

19Manju8
ಬೆಳಗಾವಿ ನಗರದಲ್ಲಿ ಸೋಮವಾರ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕ್ಷೇತ್ರದ ಜನರಿಗೆ ರಾಖಿ ಕಟ್ಟಿ ಸಂಭ್ರಮಿಸಿದರು. ಚನ್ನರಾಜ ಹಟ್ಟಿಹೊಳಿ, ಮೃಣಾಲ ಹೆಬ್ಬಾಳ್ಕರ್, ಡಾ.ಹಿತಾ ಹೆಬ್ಬಾಳ್ಕರ್ ಇತರರಿದ್ದರು.
Published on

ಬೆಳಗಾವಿ: ಭಾರತೀಯರಲ್ಲಿ ರಕ್ಷಾ ಬಂಧನದಂತಹ ಹಬ್ಬ ಸಂಸ್ಕಾರ, ಸಂಸ್ಕೃತಿ ಬೆಳೆಸುತ್ತವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ನಗರದ ಗೃಹ ಕಚೇರಿಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾಡಿಗೆ ಒಳ್ಳೆಯ ಮಳೆ, ಬೆಳೆ ಬಂದು ಎಲ್ಲೆಡೆ ಸಮೃದ್ಧಿಯಾಗಲಿ. ಸುಖ-ಸಮೃದ್ಧಿ ತುಂಬಿ ತುಳುಕಲಿ; ನನ್ನೆಲ್ಲ ಅಣ್ಣ-ತಮ್ಮಂದಿರಿಗೆ ದೇವರು ಒಳ್ಳೆಯ ಆಯಸ್ಸು, ಆರೋಗ್ಯ ಕರುಣಿಸಲಿ ಎಂದು ಕೋರಿದರು.

ಹತ್ತು ವರ್ಷಗಳಿಂದ ಕ್ಷೇತ್ರದ ಸಹೋದರರಿಗಾಗಿ ರಕ್ಷಾ ಬಂಧನವನ್ನು ವಿಶಿಷ್ಟವಾಗಿ ಆಚರಿಸಿಕೊಂಡು ಬರಲಾಗುತ್ತಿದೆ. ಕರೊನಾ ಕಾಲದಲ್ಲಿ ಬಿಟ್ಟರೆ ಎಲ್ಲ ವರ್ಷಗಳಲ್ಲೂ ಅತ್ಯಂತ ಸಂತೋಷದಿಂದ ಕ್ಷೇತ್ರದ ಸಹೋದರರಿಗೆ ರಾಕಿ ಕಟ್ಟಿಕೊಂಡು ಬರುತ್ತಿದ್ದೇನೆ ಎಂದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ಅಕ್ಕ ಲಕ್ಷ್ಮೀ ಅವರು ಕ್ಷೇತ್ರದ ಜನಪ್ರಿಯ ಶಾಸಕರಾಗಿ, ಸಚಿವರಾಗಿ, ಕ್ಷೇತ್ರದ ಮಗಳಾಗಿ ಜನಸೇವೆ ಮಾಡುತ್ತಿರುವುದು ಬಹಳ ಖುಷಿ ತಂದಿದೆ. ಅಕ್ಕ ನಮಗೆ ಸ್ಫೂರ್ತಿ. ಅವರು ಹಾಕಿಕೊಟ್ಟ ದಾರಿಯಲ್ಲಿ ಸದಾ ಮುನ್ನೆಡೆಯುತ್ತೇನೆ ಎಂದರು. ಕಾಂಗ್ರೆಸ್ ಯುವ ಮುಖಂಡ ಮೃಣಾಲ ಹೆಬ್ಬಾಳ್ಕರ್, ಡಾ.ಹಿತಾ ಹೆಬ್ಬಾಳ್ಕರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net