ರಕ್ಷಾ ಬಂಧನ ರಾಷ್ಟ್ರೀಯವಾದಿ ಸಮಾಜ ನಿರ್ಮಾಣಕ್ಕೆ ಪ್ರೇರಣೆ

udp-30-yashpal
Published on

ಉಡುಪಿ: ಸಹೋದರತೆಯ ಸಂಕೇತದ ಹಬ್ಬವಾಗಿ ಆಚರಿಸುವ ರಕ್ಷಾ ಬಂಧನದ ರಕ್ಷೆ ಸಮಾಜದಲ್ಲಿ ಮೇಲು ಕೀಳು ಭಾವನೆಯನ್ನು ಅಳಿಸಿ ಒಗ್ಗಟ್ಟಿನಿಂದ ರಾಷ್ಟ್ರೀಯವಾದಿ ಚಿಂತನೆಯ ಸಮಾಜದ ನಿರ್ಮಾಣ ಮೂಲಕ ದೇಶದ ಅಭಿವೃದ್ದಿಗೆ ಪ್ರೇರಣೆಯಾಗಲಿ ಎಂದು ಶಾಸಕ ಯಶ್​ ಪಾಲ್​ ಸುವರ್ಣ ಹೇಳಿದರು.

ಉಡುಪಿ ನಗರ ಬಿಜೆಪಿ ಯುವ ಮೋರ್ಚಾ ಮತ್ತು ಮಹಿಳಾ ಮೋರ್ಚಾ ವತಿಯಿಂದ ಉಡುಪಿ ಪುತ್ತೂರಿನ ಕುದ್ಮುಲ್​ ರಂಗ ರಾವ್​ ನಗರದ ಎಸ್​. ಟಿ. ಕಾಲನಿಯಲ್ಲಿ ಆಯೋಜಿಸಿದ್ದ ರಕ್ಷಾ ಬಂಧನ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾರಂಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಸುಪ್ರಸಾದ್​ ಶೆಟ್ಟಿ, ಗೀತಾಂಜಲಿ ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯೆ ವೀಣಾ ಶೆಟ್ಟಿ, ಬಿಜೆಪಿ ಯುವ ಮೋರ್ಚಾ ಉಡುಪಿ ನಗರ ಅಧ್ಯಕ್ಷ ರೋಶನ್​ ಶೆಟ್ಟಿ, ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಶ್ಮಿತ ಬಾಲಕೃಷ್ಣ ಶೆಟ್ಟಿ, ಮೋರ್ಚಾ ನಗರ ಪ್ರಧಾನ ಕಾರ್ಯದರ್ಶಿ ಸುಜಲ ಸುವರ್ಣ, ನಗರ ಸಭೆ ಸದಸ್ಯರಾದ ಜಯಂತಿ ಪೂಜಾರಿ, ಬಾಲಕೃಷ್ಣ ಶೆಟ್ಟಿ, ವಿಜಯ ಕೊಡವೂರು, ಸಂತೋಷ್​ ಜತ್ತನ್​, ಮಾಜಿ ನಗರ ಸಭಾ ಸದಸ್ಯರು ಸುಬೇಧ ಹಾಗೂ ಪ್ರಮುಖರಾದ ಸರೋಜ ಶೆಣೈ, ನಿತ್ಯಾನಂದ ಶೆಟ್ಟಿ, ಮಾಯ ಕಾಮತ್​ ಮೊದಲಾದವರು ಉಪಸ್ಥಿತರಿದ್ದರು. ಕಿಶೋರ್​ ಕುಮಾರ್​ ಕರಂಬಳ್ಳಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net