ಸಾನಿಧ್ಯದಲ್ಲಿ ಹರೀಶ್ ಪೂಂಜ ರಕ್ಷಾಬಂಧನ

rakshabandhana
ಉಜಿರೆಯ ಸಾನಿಧ್ಯ ಕೌಶಲ ತರಬೇತಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಶಾಸಕ ಹರೀಶ್ ಪೂಂಜ ರಕ್ಷಾಬಂಧನ ಆಚರಿಸಿದರು. ಉಜಿರೆಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರಮೇಲು ಮೊದಲಾದವರಿದ್ದರು.
Published on

ಬೆಳ್ತಂಗಡಿ: ಉಜಿರೆಯ ಸಾನಿಧ್ಯ ಕೌಶಲ ತರಬೇತಿ ಕೇಂದ್ರದಲ್ಲಿ ನಡೆದ ರಕ್ಷಾ ಬಂಧನ ಕಾರ್ಯಕ್ರಮಕ್ಕೆ ಶಾಸಕ ಹರೀಶ್ ಪೂಂಜ ಭೇಟಿ ನೀಡಿದರು.

ಸಾನಿಧ್ಯದ ಸಿಬ್ಬಂದಿ ಹಾಗೂ ವಿಶೇಷ ಮಕ್ಕಳು ಶಾಸಕರಿಗೆ ರಾಖಿ ಕಟ್ಟುವ ಮೂಲಕ ರಕ್ಷಾಬಂಧನ ಆಚರಿಸಿದರು. ಉಜಿರೆಯ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾ ಕಿರಣ್ ಕಾರಂತ್, ಉಪಾಧ್ಯಕ್ಷ ರವಿಕುಮಾರ್ ಬರಮೇಲು, ಗ್ರಾ.ಪಂ ಸದಸ್ಯ ನಾಗೇಶ್ ರಾವ್, ಸಾನಿಧ್ಯ ಕೇಂದ್ರದ ಮುಖ್ಯಸ್ಥೆ ಮಲ್ಲಿಕಾ, ಸಲಹೆಗಾರ ರೋಷನ್ ಸಿಕ್ವೇರಾ, ಶಿಕ್ಷಕರು ಹಾಗೂ ಮಕ್ಕಳು, ನಾವೂರು ಗ್ರಾಪಂ ಅಧ್ಯಕ್ಷ ಗಣೇಶ್ ಗೌಡ ಮೊದಲಾದವರು ಉಪಸ್ಥಿತರಿದ್ದರು. ಹರೀಶ್ ಪೂಂಜ ತನ್ನ ಹುಟ್ಟುಹಬ್ಬದ ಪ್ರಯುಕ್ತ ಕೇಂದ್ರದ ಮಕ್ಕಳಿಗೆ ಮಧ್ಯಾಹ್ನದ ಊಟ ಪ್ರಾಯೋಜಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net