ಉಡುಪಿಯಲ್ಲಿ ಸಿಂಪಲ್ ಸ್ಟಾರ್ ಬರ್ತ್‌ಡೇ

rakshith birthday new
Published on

ಉಡುಪಿ: ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟೂರು ಉಡುಪಿಯ ಅಲೆವೂರಿನ ಮನೆಯಲ್ಲಿ ಶನಿವಾರ ಸರಳವಾಗಿ ಹುಟ್ಟುಹಬ್ಬ ಆಚರಿಸಿದರು.

ಪ್ರತಿವರ್ಷ ಸಾವಿರಾರು ಅಭಿಮಾನಿಗಳ ಜತೆಗೆ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸುತ್ತಿದ್ದ ಅವರು ಈ ಬಾರಿ ಲಾಕ್‌ಡೌನ್ ಹಿನ್ನೆಲೆಯಲ್ಲಿ ತಂದೆ- ತಾಯಿ, ಕುಟುಂಬಸ್ಥರೊಂದಿಗೆ ಕೇಕ್ ಕತ್ತರಿಸಿ ಸಂಭ್ರಮಿಸಿದರು.

ರಕ್ಷಿತ್ ಶೆಟ್ಟಿ ಅವರ ಬಹು ನಿರೀಕ್ಷಿತ ಸಿನಿಮಾ ‘777 ಚಾರ್ಲಿ’ ಸಿನಿಮಾದ ವೀಡಿಯೋ ತುಣುಕು ಚಿತ್ರತಂಡ ಯುಟ್ಯೂಬ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಸಿನಿ ರಸಿಕರು ಸಾಕಷ್ಟು ಸಂಖ್ಯೆಯಲ್ಲಿ ವೀಡಿಯೋ ವೀಕ್ಷಿಸಿದ್ದಾರೆ. ಆದಷ್ಟು ಬೇಗ ಸಿನಿಮಾ ಬಿಡುಗಡೆಯಗಲಿ ಎಂದು ಅಭಿಮಾನಿಗಳು ಶುಭ ಹಾರೈಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net