ರಕ್ತೇಶ್ವರಿ ದೇವಿ ಸನ್ನಿಧಿಯಲ್ಲಿ ದೃಢ ಕಲಶಾಭಿಷೇಕ

New Project (8)
Published on

ಬಂಟ್ವಾಳ: ಬಿ.ಸಿ.ರೋಡಿನ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯಲ್ಲಿ ಶ್ರೀ ರಕ್ತೇಶ್ವರಿ ದೇವಿ ಮತ್ತು ಪರಿವಾರ ದೇವರಿಗೆ ಸೋಮವಾರ ದೃಢ ಕಲಶಾಭಿಷೇಕ ನೀಲೇಶ್ವರ ಉಚ್ಚಿಲತ್ತಾಯ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು.

ಬೆಳಗ್ಗೆ ಗಣಪತಿ ಹೋಮ, ವಿವಿಧ ಅಭಿಷೇಕ, ದೃಢಕಲಶ ಪೂಜೆ, ಪಂಚಗವ್ಯ, ಪಂಚಾಮೃತ, ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ನೆರವೇರಿತು.

ಮಾಜಿ ಸಚಿವ ಬಿ.ರಮಾನಾಥ ರೈ, ಪುರಸಭಾ ಅಧ್ಯಕ್ಷ ವಾಸು ಪೂಜಾರಿ, ಬುಡಾ ಅಧ್ಯಕ್ಷ ಬೇಬಿ ಕುಂದರ್, ಸೇವಾ ಸಮಿತಿ ಅಧ್ಯಕ್ಷ ವಿಶ್ವನಾಥ ಬಿ., ಉಪಾಧ್ಯಕ್ಷ ಸಂಜೀವ ಪೂಜಾರಿ, ಕಾರ್ಯದರ್ಶಿ ಎನ್.ಶಿವಶಂಕರ್, ಬ್ರಹ್ಮಕಲಶೋತ್ಸವ ಸಮಿತಿ ಕಾರ್ಯದರ್ಶಿ ಐತಪ್ಪ ಪೂಜಾರಿ, ಕೋಶಾಧಿಕಾರಿ ನಾರಾಯಣ ಹೆಗ್ಡೆ, ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯ ದೇವಪ್ಪ ಕುಲಾಲ್ ಪಂಜಿಕಲ್ಲು, ಸಮಿತಿ ಸದಸ್ಯರಾದ ಬಿ.ಮೋಹನ್, ರಾಜೇಶ್ ಎಲ್.ನಾಯಕ್, ಗೋಪಾಲ ಸುವರ್ಣ, ಸತೀಶ್ ಕುಮಾರ್, ಪುಷ್ಪರಾಜ ಶೆಟ್ಟಿ, ಅರ್ಚಕ ರಘುಪತಿ ಭಟ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net