

ಕುಶಾಲನಗರ: ತಾಲ್ಲೂಕು ಆರೋಗ್ಯಾಧಿಕಾರಿಗಳ ಕಛೇರಿ ವತಿಯಿಂದ ವಿಶ್ವ ಮಲೇರಿಯಾ ದಿನವನ್ನು ಸೋಮವಾರ ಆಚರಿಸಲಾಯಿತು.
ಕುಶಾಲನಗರದ ತಾಲೂಕು ಆರೋಗ್ಯ ಅಧಿಕಾರಿ ಕಛೇರಿ ಬಳಿಯಿಂದ ಆಶಾ ಕಾರ್ಯಕರ್ತರು ಘೋಷಣೆಗಳನ್ನು ಕೂಗುವ ಮೂಲಕ ಜನಜಾಗೃತಿ ಮೂಡಿಸಿದರು.
ಜಾಥಾವನ್ನು ಉದ್ಘಾಟಿಸಿದ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಇಂದೂಧರ್ ಮಾತನಾಡಿ, ಸಾರ್ವಜನಿಕರಲ್ಲಿ ಆರೋಗ್ಯದ ಕುರಿತು ಅರಿವು ಮೂಡಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಇಲಾಖೆಯ ಗುರಿಯಾಗಿದೆ. ಸಾರ್ವಜನಿಕರು ತಮ್ಮ ಸುತ್ತಲ ಪರಿಸರವನ್ನು ಸ್ವಚ್ಛಂದವಾಗಿ ಇಟ್ಟುಕೊಳ್ಳುವ ಮೂಲಕ ಸಾಂಕ್ರಾಮಿಕಗಳನ್ನು ತಡೆಗಟ್ಟಲು ಕರೆಕೊಟ್ಟರು.
ಮಲೇರಿಯಾ ನಿರ್ಮೂಲನೆ, ಶೂನ್ಯ ಮಲೇರಿಯಾ, ಲಾರ್ವ ಹಾರಿ ಮೀನುಗಳ ಬಗ್ಗೆ ಹಾಗೂ ಜ್ವರ ಪರೀಕ್ಷೆ, ರಕ್ತ ಪರೀಕ್ಷೆ, ಶೀಘ್ರ ಪತ್ತೆ, ತ್ವರಿತ ಚಿಕಿತ್ಸೆ ಬಗ್ಗೆ ಡಾ.ಇಂದೂಧರ್ ಕರೆಕೊಟ್ಟರು. ಈ ಸಂದರ್ಭ ಜಿಲ್ಲಾ ಆರೋಗ್ಯ ಶಿಕ್ಷಣ ಅಧಿಕಾರಿ ಶಾಂತಿ, ಹಿರಿಯ ಆರೋಗ್ಯ ನಿರೀಕ್ಷಕ ವಿಶ್ವಜ್ಞಾ, ಅಶ್ವಿನಿ, ಮಹೇಶ್, ಆಶಾ ಮೆಂಟರ್ ರಮ್ಯಾ, ಡಿಇಒ ಕವಿತಾ ಪಾಲ್ಗೊಂಡಿದ್ದರು.
ಆಸ್ಪತ್ರೆ ಆವರಣದಿಂದ ಹೊರಟ ಜಾಥಾ ಪಟ್ಟಣದ ವಿವಿಧ ರಸ್ತೆಗಳ ಮೂಲಕ ಸಂಚರಿಸಿ ಜನಜಾಗೃತಿ ಮೂಡಿಸಿತು.