ಮಾದರಿ ರಾಮ ಮಂದಿರ ವೀಕ್ಷಣೆಗೆ ಅವಕಾಶ

IMG_20250111_190414_969.jpg
Published on

ಹುಬ್ಬಳ್ಳಿ: ಇಲ್ಲಿಯ ನೃಪತುಂಗ ಬೆಟ್ಟದ ಬಳಿಯ ಪಿರಾಮಿಡ್ ಧ್ಯಾನ ಮಂದಿರದಲ್ಲಿ ಪ್ರದರ್ಶನಕ್ಕೆ ಇಡಲಾಗಿರುವ ಅಯೋಧ್ಯೆ ರಾಮ ಮಂದಿರ ಮಾದರಿಯ ವೀಕ್ಷಣೆಗೆ ಜ. 22ರ ವರೆಗೂ ಅವಕಾಶ ಕಲ್ಪಿಸಲಾಗಿದೆ.

ಈ ಮೊದಲು ಜ. 16ರ ವರೆಗೆ ಮಾತ್ರ ಸಾರ್ವಜನಿಕರ ವೀಕ್ಷಣೆಗೆ ಇಡಲಾಗಿತ್ತು. ಜನರ ಒತ್ತಾಸೆಯ ಮೇರೆಗೆ ಇನ್ನಷ್ಟು ದಿನ ಪ್ರದರ್ಶನ ಮುಂದುವರಿಸಲಾಗಿದೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯಬೇಕೆಂದು ಧ್ಯಾನ ಮಂದಿರದ ಅಧ್ಯಕ್ಷ ಮಲ್ಲಿಕಾರ್ಜುನ ಸಾವಕಾರ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net