ಶಿವಮೊಗ್ಗ ಜಿಲ್ಲಾದ್ಯಂತ ಸಂಭ್ರಮ ಸಡಗರದ ರಂಜಾನ್

ramjan
ರಂಜಾನ್ ಅಂಗವಾಗಿ ಶಿವಮೊಗ್ಗದ ಈದ್ಗಾ ಮೈದಾನದಲ್ಲಿ ನೂರಾರು ಮಂದಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದರು.
Published on

ಶಿವಮೊಗ್ಗ: ಒಂದು ತಿಂಗಳ ಉಪವಾಸದ ಬಳಿಕ ಮುಸ್ಲಿಮರು ಗುರುವಾರ ಜಿಲ್ಲಾದ್ಯಂತ ಸಂಭ್ರಮ ಸಡಗರದಿಂದ ರಂಜಾನ್ ಆಚರಿಸಿದರು. ಮಸೀದಿಗೆ ತೆರಳಿ ಪ್ರಾರ್ಥನೆ ಸಲ್ಲಿಸಿದ ಬಳಿಕ ತಂಡೋಪತಂಡವಾಗಿ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಪ್ರಾರ್ಥನೆ ಬಳಿಕ ಆತ್ಮೀಯರು ಹಾಗೂ ಸಂಬಂಧಿಕರ ಮನೆಗೆ ತೆರಳಿ ಶುಭಾಶಯ ಕೋರಿದರು. ಚಿಕ್ಕ ಮಕ್ಕಳು ಹೊಸ ಬಟ್ಟೆಯುಟ್ಟು ಸಂಭ್ರಮಿಸಿದರು. ಶಿವಮೊಗ್ಗದ ವಿವಿಧ ಪ್ರದೇಶಗಳಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿತ್ತು. ಪ್ರಮುಖ ರಸ್ತೆಗಳು ಹಾಗೂ ವೃತ್ತಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ವಾಹನ ಸಂಚಾರ ಸುಗಮವಾಗಿರುವಂತೆ ವ್ಯವಸ್ಥೆ ಮಾಡಲಾಗಿತ್ತು.
ಡಿಸಿ ಕಚೇರಿ ಎದುರು ಸವಳಂಗ ರಸ್ತೆಯಲ್ಲಿ ಹಾಗೂ ಖಾಸಗಿ ಬಸ್ ನಿಲ್ದಾಣದ ಸಮೀಪದ ಖಬರಸ್ತಾನ್ ಭಾಗದಲ್ಲಿ ಕೆಲ ಸಮಯ ವಾಹನ ದಟ್ಟಣೆ ಹೆಚ್ಚಿದ ಸಂದರ್ಭ ಟ್ರಾಫಿಕ್ ಜಾಮ್ ಆಗಿತ್ತು. ಸಂಚಾರಿ ಠಾಣೆ ಪೊಲೀಸರು ಪರಿಸ್ಥಿತಿ ನಿಭಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net