

ಮಂಗಳೂರು : ಮನಸ್ಸಿನ ಚಂಚಲತೆಯನ್ನು ನಿವಾರಿಸುವ ಕ್ರಮಬದ್ಧ ಉಪಾಯವೇ ಯೋಗ. ನಿತ್ಯ ಯೋಗಾಭ್ಯಾಸ ಮಾಡುವುದರಿಂದ ಮನಸ್ಸು ಪ್ರಪುಲ್ಲಗೊಳ್ಳುತ್ತದೆ. ಶಾಂತಿ, ನೆಮ್ಮದಿ ದೊರಕುತ್ತದೆ ಹಾಗೂ ಆಧ್ಯಾತ್ಮಿಕ ಸಾಧನೆಗೆ ಸಹಕಾರಿಯಾಗುತ್ತದೆ ಎಂದು ರಾಮಕೃಷ್ಣ ಮಠದ ಶ್ರೀ ಜಿತಕಾಮಾನಂದ ಸ್ವಾಮೀಜಿ ಹೇಳಿದರು.
ಯೋಗಗುರು ಗೋಪಾಲಕೃಷ್ಣ ದೇಲಂಪಾಡಿ ಅವರ ನೇತೃತ್ವದಲ್ಲಿ ಮಂಗಳಾದೇವಿಯ ರಾಮಕೃಷ್ಣ ಮಠದಲ್ಲಿ ಆರಂಭವಾದ ಯೋಗ ಶಿಬಿರ ಉದ್ಘಾಟಿಸಿ ಆಶೀರ್ವಚನ ನೀಡಿದ ಅವರು ಯೋಗವು ದೇಹದೊಳಗೆ ಸರಿಯಾದ ಸಮನ್ವಯ ಮತ್ತು ಸೂಕ್ಷ್ಮಬಲದ ಹಿಡಿತದಲ್ಲಿ ಸಹಾಯ ಮಾಡುತ್ತದೆ ಎಂದರು.
ಮುಖ್ಯ ಅತಿಥಿಯಾಗಿದ್ದ ರಾಮಚಂದ್ರ ಕೆ. ಎಸ್. ಮಾತನಾಡಿ ಯೋಗ ಮಾಡುವ ಮೂಲಕ ಕಾಯಿಲೆ ಮುಂದೂಡಬಹುದು .ಮನಸ್ಸನ್ನು ಸುಸ್ಥಿತಿಯಲ್ಲಿ ಇಡಲು ಯೋಗ ಸಹಕಾರಿಯಾಗುತ್ತದೆ ಎಂದರು. ಯೋಗಗುರು ಗೋಪಾಲಕೃಷ್ಣ ದೇಲಂಪಾಡಿ ಉಪಸ್ಥಿತರಿದ್ದರು. ಕಾರ್ತಿಕ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.