ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಗೆ ಸಹಕಾರ ಮಾಣಿಕ್ಯ ಪ್ರಶಸ್ತಿ

mng-22nov-ramakrishna
Published on


ಮಂಗಳೂರು : ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಎಸ್‌ಸಿಡಿಸಿಸಿ ಬ್ಯಾಂಕ್ ಹಾಗೂ ದ.ಕ. ಮತ್ತು ಉಡುಪಿ ಜಿಲ್ಲೆಗಳ ಸಹಕಾರ ಸಂಘಗಳ ಸಹಯೋಗದಲ್ಲಿ ಮಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ 71ನೇ ಅಖಿಲ ಭಾರತ ಸಹಕಾರ
ಸಪ್ತಾಹ ಸಮಾರಂಭದಲ್ಲಿ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಸರ್ವಾಂಗೀಣ ಪ್ರಗತಿ ಸಾಧಿಸಿದ ಅತ್ಯುತ್ತಮ ಕ್ರೆಡಿಟ್ ಸಹಕಾರ ಸಂಘಕ್ಕೆ ನೀಡಲಾಗುವ ಸಹಕಾರ ಮಾಣಿಕ್ಯ ಪ್ರಶಸ್ತಿಯನ್ನು ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ ಪ್ರದಾನ ಮಾಡಲಾಯಿತು.
ಸೊಸೈಟಿ ಅಧ್ಯಕ್ಷ ಜೈರಾಜ್ ಬಿ.ರೈ. ಪ್ರಶಸ್ತಿ ಸ್ವೀಕರಿಸಿದರು. ವಿಧಾನಸಭೆಯ ಸ್ಪೀಕರ್ ಯು.ಟಿ. ಖಾದರ್, ಸಹಕಾರ ಸಚಿವ ಕೆ.ಎನ್. ರಾಜಣ್ಣ, ದ.ಕಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕ, ಮಾಜಿ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ರಾಜ್ಯ ಸಹಕಾರ ಮಹಾಮಂಡಳದ ಅಧ್ಯಕ್ಷ ಜಿ.ಟಿ ದೇವೇಗೌಡ, ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ಶಾಸಕ ಡಾ.ವೈ.ಭರತ್ ಶೆಟ್ಟಿ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬೆಳ್ಳಿಪ್ಪಾಡಿ ಪ್ರಸಾದ್ ಕೌಶಲ್ ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್‌ನ ಅಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಮುಂತಾದವರು ಉಪಸ್ಥಿತರಿದ್ದರು.
ಈ ಹಿಂದಿನ ವರ್ಷಗಳಲ್ಲಿ ಶ್ರೀ ರಾಮಕೃಷ್ಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಗೆ 6 ಬಾರಿ ರಾಜ್ಯಮಟ್ಟದ
ಹಾಗೂ 13 ಬಾರಿ ಜಿಲ್ಲಾ ಮಟ್ಟದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿಯು ಲಭಿಸಿದ್ದು, ಈಗ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಯಲ್ಲಿ ಸಹಕಾರ ಮಾಣಿಕ್ಯ ಪ್ರಶಸ್ತಿ ಪಡೆದ ಪ್ರಥಮ ಹಾಗೂ ಏಕೈಕ ಕ್ರೆಡಿಟ್ ಸಹಕಾರ ಸಂಘ ಎಂಬ ಹೆಗ್ಗಳಿಕೆಗೆ ಸಂಘವು ಪಾತ್ರವಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net