

ಕಡಬ: ಶ್ರೀ ರಾಮಕುಂಜೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ವತಿಯಿಂದ ಒಂದು ದಿನದ ಸ್ವಚ್ಛತಾ ಕಾರ್ಯಕ್ರಮವು ಕೊಲ ಎಂಡೋ ಪಾಲನಾ ಕೇಂದ್ರ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ಪರಿಸರದಲ್ಲಿ ನಡೆಯಿತು.
ಶಿಬಿರದಲ್ಲಿ ಭಾಗವಹಿಸಿದ ಸುಮಾರು 30 ಜನ ಎನ್ನೆಸ್ಸೆಸ್ ಸ್ವಯಂಸೇವಕರು ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಎಂಡೋಪಾಲನಾ ಕೇಂದ್ರದ ಆವರಣದಲ್ಲಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.
ಪ್ರಾಂಶುಪಾಲ ಚಂದ್ರಶೇಖರ್ ಕೆ. ಮತ್ತು ವೈದ್ಯಾಧಿಕಾರಿ ಡಾ.ಶಿಶಿರ ಮಾರ್ಗದರ್ಶನ ನೀಡಿದರು. ರಾಷ್ಟ್ರೀಯ ಸೇವಾ ಯೋಜನಾ ಟಕದ ಯೋಜನಾಧಿಕಾರಿ ಕೀರ್ತನ್ ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಮರಿಯಮ್ಮ, ಶ್ರುಶೂಕ್ಷಣಾಧಿಕಾರಿ ರಹಮತ್, ಉಪನ್ಯಾಸಕ ಶಿವಪ್ರಸಾದ್ ಹೊಳ್ಳ ಇದ್ದರು.