ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಸುದರ್ಶನ್ ಆಯ್ಕೆ

Kasapa Datti
Published on

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ನೀಡಲಾಗುವ 2025ನೇ ಸಾಲಿನ ಕನ್ನಡ ಚಳವಳಿ ವೀರ ಸೇನಾನಿ ಮ. ರಾಮಮೂರ್ತಿ ದತ್ತಿ ಪ್ರಶಸ್ತಿಗೆ ಮೈಸೂರಿನ ಕನ್ನಡ ಹೋರಾಟಗಾರ ಸ.ರ. ಸುದರ್ಶನ್ ಆಯ್ಕೆಯಾಗಿದ್ದಾರೆ. ರಾಜ್ಯಾದ್ಯಂತ ಕನ್ನಡ ಚಳವಳಿಗೆ ಶಕ್ತಿ ಹಾಗೂ ಹೋರಾಟದ ಸ್ಪೂರ್ತಿ ತುಂಬಿದ ಮ. ರಾಮಮೂರ್ತಿ ಹೆಸರಿನಲ್ಲಿ ಬೆಂಗಳೂರು ನಗರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ದತ್ತಿ ಸ್ಥಾಪಿಸಿದು,್ದ ಕನ್ನಡ ನಾಡು, ನುಡಿ, ನೆಲ, ಜಲ, ಸಂಸ್ಕೃತಿಗಳ ರಕ್ಷಣೆಗೆ ಹಾಗೂ ಪ್ರಗತಿಗೆ ಶ್ರಮಿಸಿ ಎಲೆಮರೆಯ ಕಾಯಿಗಳಂತಿರುವ ಕನ್ನಡ ಕಾರ್ಯಕರ್ತರಿಗೆ ಈ ಗೌರವ ಸಲ್ಲಬೇಕು ಎಂಬ ದತ್ತಿಯ ಆಶಯ. ಪ್ರಶಸ್ತಿಗೆ ಆಯ್ಕೆಯಾಗಿರುವ ಸ.ರ.ಸುದರ್ಶನ ಗೋಕಾಕ್ ಚಳವಳಿಯ ಆರಂಭದಿಂದಲೂ ಕನ್ನಡ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡವರು. ಕನ್ನಡವನ್ನು ಶಿಕ್ಷಣ ಮಾಧ್ಯಮವಾಗಿಸಲು, ಕನ್ನಡಕ್ಕೆ ದೊರೆತ ಶಾಸ್ತ್ರೀಯ ಸ್ಥಾನಮಾನದ ಸದ್ಭಳಕೆ ಕುರಿತು ನಿರಂತರವಾಗಿ ಕನ್ನಡಪರ ಹೋರಾಟಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net