ಸೆ.26ಕ್ಕೆ ರಾಮನಗರ ಬಂದ್? ಭಾನುವಾರ ಪೂರ್ವಭಾವಿ ಸಭೆ

14-1-rama-Sri -bund
Published on

ರಾಮನಗರ: ಕಾವೇರಿ ಕಿಚ್ಚು ರಾಜ್ಯದಲ್ಲಿ ಹೆಚ್ಚಿದ್ದು ಸೆ.26ರಕ್ಕೆ ವಿವಿಧ ಸಂಘಟನೆಗಳು ಬೆಂಗಳೂರು ಬಂದ್ ಗೆ ಕರೆ ನೀಡಿರುವ ಬೆನ್ನಲ್ಲೇ ರಾಮನಗರ ಬಂದ್ ಗೂ ಚಿಂತನೆ ನಡೆದಿದ್ದು, ಇದಕ್ಕಾಗಿ ಭಾನುವಾರ ಪೂರ್ವಭಾವಿ ಸಭೆ ಕರೆಯಲಾಗಿದೆ.

ಬೆಂಗಳೂರು ಬಂದ್ ಕರೆ ನೀಡಿರುವ ಹಿನ್ನೆಲೆಯಲ್ಲಿ ರಾಮನಗರದಲ್ಲೂ ಹೋರಾಟದಲ್ಲಿ ಪಾಲ್ಗೊಳ್ಳುವ ನಿಟ್ಟಿನಲ್ಲಿ ಭಾನುವಾರ ಬೆಳಿಗ್ಗೆ 10 ಗಂಟೆಗೆ ರಾಮನಗರದ ಎಪಿಎಂಸಿ ರೈತ ಸಭಾಂಗಣದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.

ಈ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಪದಾಧಿಕಾರಿಗಳು ಸಭೆಗೆ ಹಾಜರಾಗಿ ಬಂದ್ ಸಂಬಂಧ ಸಲಹೆ ಸೂಚನೆಗಳನ್ನು ನೀಡುವಂತೆ ರಾಮನಗರ ಜಿಲ್ಲಾ ಶಾಶ್ವತ  ನೀರಾವರಿ ಹೋರಾಟ ಸಮಿತಿ ಅಧ್ಯಕ್ಷ ರಾಂಪುರ ಧರಣೇಶ್ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net