ದಶಪಥ ಪರಿಶೀಲನೆಗೆ ತಜ್ಞರ ತಂಡ

Bangalore-Mysore-Expressway
Published on

ರಾಮನಗರ: ಬೆಂಗಳೂರು–ಮೈಸೂರು ದಶಪಥ ಹೆದ್ದಾರಿಯಲ್ಲಿ ಹ ಅಪಘಾತಗಳು ಹೆಚ್ಚಾಗಿರುವ ಬೆನ್ನಲ್ಲೇ, ಹೆದ್ದಾರಿ  ಸುರಕ್ಷತೆ  ಪರಿಶೀಲನೆಗಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಮೂವರು ತಜ್ಞರನ್ನೊಳಗೊಂಡ ಸಮಿತಿಯನ್ನು ರಚನೆ ಮಾಡಿದೆ.

ರಸ್ತೆ ಸುರಕ್ಷತೆ ಸಲಹೆಗಾರ ಸುದರ್ಶನ್ ಕೆ. ಪೊಪ್ಲಿ, ಪ್ರಾಧಿಕಾರದ ಉಪ ವ್ಯವಸ್ಥಾಪಕ ಹಾಗೂ ರಸ್ತೆ ಸುರಕ್ಷತಾ ಅಧಿಕಾರಿ ಪ್ರವೀಣ್ ಕುಮಾರ್ ಮತ್ತು  ಸೊಹ್ನಾ-ದೌಸಾ ಎಕ್ಸ್‌ಪ್ರೆಸ್ ಯೋಜನೆ ಜಾರಿ ಘಟಕದ ವ್ಯವಸ್ಥಾಪಕ ಜೈವರ್ಧನ್ ಸಿಂಗ್ ಸಮಿತಿಯಲ್ಲಿದ್ದಾರೆ.

ಈ ಮೂವರ ಸಮಿತಿಯು ಜುಲೈ 17ರಂದು ಎಕ್ಸ್‌ಪ್ರೆಸ್‌ ವೇಗೆ ಭೇಟಿ ನೀಡಿ ಸುರಕ್ಷತೆ ಕುರಿತು ಪರಿಶೀಲನೆ ನಡೆಸಿ, ಹತ್ತು ದಿನದೊಳಗೆ ವರದಿ ನೀಡಬೇಕು ಎಂದು ಪ್ರಾಧಿಕಾರದ ರಸ್ತೆ ಸುರಕ್ಷತೆ ವಿಭಾಗದ ಮುಖ್ಯ ಪ್ರಧಾನ ವ್ಯವಸ್ಥಾಪಕ  ಸುನೀಲ್ ಜಿಂದಾಲ್ ಸೂಚನೆ ನೀಡಿದ್ದಾರೆ.

ಎಕ್ಸ್‌ಪ್ರೆಸ್ ವೇ ವಾಹನಗಳ ಸಂಚಾರಕ್ಕೆ ಮುಕ್ತಗೊಂಡ ಬಳಿಕ 550ಕ್ಕೂ ಹೆಚ್ಚು ಅಪಘಾತಗಳು ಸಂಬವಿಸಿ 15೦ ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಅದರ ಬೆನ್ನಲ್ಲೇ, ರಸ್ತೆಯ ಸುರಕ್ಷತೆ ಕುರಿತು ವ್ಯಾಪಕ ಚರ್ಚೆಗಳು ಆರಂಭವಾಗಿದ್ದವು. ಅವೈಜ್ಞಾನಿಕವಾಗಿ ರಸ್ತೆ ನಿರ್ಮಿಸಿರುವುದೇ ಇದಕ್ಕೆ ಕಾರಣ ಎಂಬ ಆರೋಪಗಳು ಕೇಳಿ ಬಂದಿದ್ದವು. ಇತ್ತೀಚೆಗೆ ಸಂಚಾರ ಮತ್ತು ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಸಹ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net