ಬೆಂಗಳೂರು - ಮೈಸೂರು ದಶಪಥಕ್ಕೆ ಸ್ಪೀಡ್ ರಡಾರ್ ಕಣ್ಣು ಅತಿವೇಗಕ್ಕೆ ಬೀಳಲಿದೆ ದಂಢ

04-07-rama-speed
Published on

ರಾಮನಗರ: ಬೆಂಗಳೂರು - ದಶಪಥ ಹೆದ್ದಾರಿಯಲ್ಲಿ ಹೆಚ್ಚುತ್ತಿರುವ ಅಪಘಾತ ಪ್ರಕರಣಗಳನ್ನು ತಡೆಯುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಿಟ್ಟಿರುವ ರಾಮನಗರ ಜಿಲ್ಲಾ ಪೊಲೀಸ್ ಅತಿವೇಗವಾಗಿ ಸಂಚರಿಸುವ ವಾಹನಗಳ ಚಾಲಕರಿಗೆ ದಂಢ ವಿಧಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಹೆದ್ದಾರಿಯಲ್ಲಿ ನಿಗಧಿಪಡಿಸಿರುವ 100 ಕಿಮೀಗಿಂತ ಹೆಚ್ಚಿನ ವೇಗದಲ್ಲಿ ವಾಹನ ಚಾಲನೆ ಮಾಡಿದರೆ ದಂಡ ಬೀಳುವುದು ಗ್ಯಾರಂಟಿ. ಇದಕ್ಕಾಗಿ ರಾಮನಗರ ಮತ್ತು ಚನ್ನಪಟ್ಟಣ ಉಪವಿಭಾಗ ವ್ಯಾಪ್ತಿಯ ಸಂಚಾರಿ ಪೊಲೀಸರು ಸೋಮವಾರ ಸಂಜೆಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದಾರೆ. ಇದಕ್ಕಾಗಿ ಎರಡೂ ಕಡೆಗಳಲ್ಲಿ ಸ್ಪೀಡ್ ರಾಡರ್‌ಗಳನ್ನು ಬಳಕೆ ಮಾಡಿಕೊಂಡು ವಾಹನಗಳ ಮೇಲೆ ನಿಗಾ ಇಟ್ಟಿದ್ದಾರೆ.

ನೂತನ ಬೆಂಗಳೂರು - ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳ ಹಿಂದೆ ಸಂಚಾರ ಮತ್ತು ರಸ್ತೆ ಸುರಕ್ಷತಾ ಎಡಿಜಿಪಿ ಅಲೋಕ್ ಕುಮಾರ್ ಹೆದ್ದಾರಿ ಪರಿಶೀಲನೆ ನಡೆಸಿ ಕೆಲವು ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಿದ್ದರು.

ಈ ಹಿನ್ನೆಲೆಯಲ್ಲಿ ಕಾರ್ಯಪ್ರವೃತ್ತರಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ, ಹೆದ್ದಾರಿಯಲ್ಲಿ ಅಪಘಾತ ನಿಯಂತ್ರಣಕ್ಕೆ ವಾಹನಗಳ ವೇಗಕ್ಕೂ ಕಡಿವಾಣ ಹಾಕುವ ಉದ್ದೇಶದಿಂದ ಇದನ್ನು ಕಾರ್ಯ ರೂಪಕ್ಕೆ ತಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net