ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ

21-07-bidadi-1
Published on

* ಜ್ಞಾನ ವಿಕಾಸ್​ ವಿದ್ಯಾ ಸಂಘದ ಅಧ್ಯಕ್ಷ ಸಿ.ಎಂ.ಲಿಂಗಪ್ಪ ಸಲಹೆ

ಬಿಡದಿ
ಯುವ ಪೀಳಿಗೆ ಕ್ರೀಡೆಗಳನ್ನು ಮರೆತು ಮೊಬೈಲ್​ ಹಾಗೂ ಟಿವಿಗಳಲ್ಲಿ ತಲ್ಲಿನರಾಗುವ ಮೂಲಕ ಕ್ರೀಡೆಗಳನ್ನು ಮರೆಯುತ್ತಿದ್ದಾರೆ ಎಂದು ಜ್ಞಾನ ವಿಕಾಸ್​ ವಿದ್ಯಾ ಸಂಘದ ಅಧ್ಯಕ್ಷ ಸಿ.ಎಂ.ಲಿಂಗಪ್ಪ ತಿಳಿಸಿದರು.

ಪಟ್ಟಣದ ಜ್ಞಾನ ವಿಕಾಸ್​ ಇನ್​ಸ್ಟಿಟ್ಯೂಟ್​ ಆಫ್​ ಮ್ಯಾನೇಜ್​ಮೆಂಟ್​ ಸ್ಟಡಿಸ್​ ಆ್ಯಂಡ್​ ಕಾಮರ್ಸ್​ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಂತರ್​ ಕಾಲೇಜು ಮಟ್ಟದ ಪುರುಷರ ವಾಲಿಬಾಲ್​ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ಯುವಕರು ಕ್ರೀಡೆಯಲ್ಲಿ ಆತ್ಮವಿಶ್ವಾಸದಿಂದ ಭಾಗವಹಿಸಬೇಕು. ಕ್ರೀಡೆಯಲ್ಲಿ ಸೋಲು-ಗೆಲುವು ಸಾಮಾನ್ಯ. ಹಾಗಾಗಿ ಅವುಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂದರು.


ಬೆಂಗಳೂರಿನ ದೈಹಿಕ ಶಿಕ್ಷಣ ವಿಶ್ವವಿದ್ಯಾಲಯದ ಮುಖ್ಯಸ್ಥ ಸುಂದರ್​ ರಾಜ್​ ಅರಸ್​ ಮಾತನಾಡಿ, ವಿದ್ಯಾರ್ಥಿಗಳ ದೈಹಿಕ, ಮಾನಸಿಕ ಆರೋಗ್ಯ ವೃದ್ಧಿಗೆ ಕ್ರೀಡೆ ಸಹಕಾರಿಯಾಗಿದೆ. ಕ್ರೀಡಾ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲು ವಿದ್ಯಾರ್ಥಿಗಳ ಪಾಲಕರು ಉತ್ತೇಜನ ನೀಡಬೇಕು. ಮಕ್ಕಳಿಗೆ ಆಸಕ್ತಿಯಿರುವ ಕ್ರೀಡೆಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಬೇಕು ಎಂದರು.

ವಿದ್ಯಾ ಸಂಸ್ಥೆಯ ನಿರ್ದೇಶಕ ಗಾಣಕಲ್​ ನಟರಾಜ್​ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಯುವಕರು ಅನೇಕ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ಬೇಸರದ ಸಂಗತಿ. ವಿದ್ಯಾರ್ಥಿಗಳು ಪಠ್ಯದ ಜತೆಗೆ ನಿರಂತರವಾಗಿ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದರು.
ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಟಿ.ರೂಪಾ, ಪ್ರಾಧ್ಯಾಪಕ ಆನಂದ್​ ಪ್ರಭು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net