ಕಾರು ಅಪಘಾತ ಪತ್ನಿ ಸಾವು ಪತಿ ಗಂಭೀರ

1691411702567_07-08-bidadi-1.jpg
Published on

ಬಿಡದಿ: ಹೆದ್ದಾರಿಯ ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪತ್ನಿ ಮೃತಪಟ್ಟು ಪತಿಗೆ ಗಂಭೀರ ಗಾಯಗಳಾಗಿರುವ ಘಟನೆ ಬೆಂಗಳೂರು- ಮೈಸೂರು ದಶಪಥ ಹೆದ್ದಾರಿಯ ತಮ್ಮಣ್ಣನದೊಡ್ಡಿ ಬಳಿ ಭಾನುವಾರ ರಾತ್ರಿ ನಡೆದಿದೆ.

ಮಂಜುಳಾ ಮೃತ ಮಹಿಳೆ, ಪತಿ ಕೃಷ್ಣಮೂರ್ತಿಗೆ ಗಂಭೀರ ಗಾಯಗಳಾಗಿದ್ದು ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ರಾಮನಗರ ತಾಲೂಕಿನ ತಿಬ್ಬೇಗೌಡನದೊಡ್ಡಿ ಗ್ರಾಮದವರಾಗಿದ್ದು ಬೆಂಗಳೂರಿನಲ್ಲಿ ವಾಸವಿದ್ದು ಭಾನುವಾರ ಗ್ರಾಮಕ್ಕೆ ಬಂದು ರಾತ್ರಿ ಬೆಂಗಳೂರಿಗೆ ವಾಪಸ್ಸು ಮರಳುತ್ತಿದ್ದಾಗ ಕಾರು ಅಪಘಾತವಾಗಿದೆ.

ಕೃಷ್ಣಮೂರ್ತಿ ಅವರ ನಿಯಂತ್ರಣ ತಪ್ಪಿದ ಕಾರು ರಸ್ತೆಯ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸ್ಥಳದಲ್ಲೆ ಮಂಜುಳಾ ಸಾವನ್ನಪ್ಪಿದ್ದಾರೆ. ಕೃಷ್ಣಮೂರ್ತಿ ಅವರಿಗೆ ಗಂಭೀರ ಗಾಯಗಳಾಗಿದ್ದ ಕಾರಣ ಭರತ್ ಕೆಂಪಣ್ಣ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತದೇಹವನ್ನ ರಾಜರಾಜೇಶ್ವರಿ ಆಸ್ಪತ್ರೆಯ ಶವಗಾರಕ್ಕೆ ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ.

ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದೂರು ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net