ನಗರ ದೇವತೆಗಳಿಗೆ ಮಡಿಲಕ್ಕಿ ನೀಡಿದ ಶಾಸಕ ಎಚ್.ಎ.ಇಕ್ಬಾಲ್‌ಹುಸೇನ್

IMG-20230704-WA0034.jpg
Published on

ರಾಮನಗರ : ಶ್ರೀ ಚಾಮುಂಡೇಶ್ವರಿ ಅಮ್ಮನವರ ಕರಗ ಮಹೋತ್ಸವದ ಅಂಗವಾಗಿ ನಗರದಲ್ಲಿ ಶಕ್ತಿ ದೇವತೆಗಳಿಗೆ ಶಾಸಕ ಎಚ್.ಎ.ಇಕ್ಬಾಲ್‌ ಹುಸೇನ್ ಮಡಿಲಕ್ಕಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.

ಈ ವೇಳೆ ಶಾಸಕ ಎಚ್.ಎ.ಇಕ್ಬಾಲ್‌ಹುಸೇನ್ ಮಾತನಾಡಿ, ನನ್ನ ಕ್ಷೇತ್ರದ ಶಕ್ತಿದೇವತೆಯಾದ ಚಾಮುಂಡೇಶ್ವರಿ ಅಮ್ಮನ ಆರ್ಶೀವಾದದಿಂದ ಶಾಸಕನಾಗಿದ್ದೇನೆ. ನಾನು ಶಾಸಕನಾದ ನಂತರ ನಾಡಹಬ್ಬ ಆಚರಣೆ ಮಾಡುವ ಅವಕಾಶ ನನಗೆ ಸಿಕ್ಕಿದ್ದು ನನ್ನ ಭಾಗ್ಯವಾಗಿದೆ.

ಚಾಮಂಡೇಶ್ವರಿ ಬಡಾವಣೆಯ ಪ್ರಮುಖ ಶಕ್ತಿದೇವತೆ ಶ್ರೀ ಚಾಮುಂಡೇಶ್ವರಿ, ಐಜೂರು ಆದಿಶಕ್ತಿ ದೇವತೆ, ಬಿಸಿಲು ಮಾರಮ್ಮ, ಮಗ್ಗದಕೇರಿ ಮಾರಮ್ಮ, ಭಂಡಾರಮ್ಮದೇವಿ, ಮುತ್ತಮಾರಮ್ಮ, ಶೆಟ್ಟಿಹಳ್ಳಿ ಆದಿಶಕ್ತಿ, ಕೊಂಕಾಣಿದೊಡ್ಡಿ ಆದಿಶಕ್ತಿ ಕರಗ ನಡೆಯುವ ದೇವಾಲಯಗಳಲ್ಲಿ ದೇವಿಯವರಿಗೆ ಮಡಿಲಕ್ಕಿ ನೀಡಿ ಹಬ್ಬಾಚರಣೆ ಯಶಸ್ವಿಯಾಗಿ ನಡೆಯಲಿ ಎಂದು ಪ್ರಾರ್ಥಿಸಿಕೊಂಡಿದ್ದೇನೆ ಎಂದರು.

ಈ ವರ್ಷ ಸಕಾಲದಲ್ಲಿ ಮಳೆಯಾಗದ ಪರಿಣಾಮ ರೈತರು ಕಂಗಾಲಾಗಿದ್ದು, ಕುಡಿಯುವ ನೀರಿಗೂ ಸಮಸ್ಯೆ ಎದುರಾಗುವ ಆತಂಕ ನಮ್ಮನ್ನು ಕಾಡುತ್ತಿದೆ. ಇಂತಹ ಸಮಯದಲ್ಲಿ ತಾಯಿಯ ಕೃಪೆಯಿಂದ ಉತ್ತಮ ಮಳೆಯಾಗಿ ಅದರಿಂದ ದೇಶಕ್ಕೆ ಅನ್ನದಾತನಾಗಿರುವ ರೈತರು ಉತ್ತಮವಾದ ಬೆಳೆಗಳನ್ನು ಬೆಳೆಯಲು ಮಳೆ ಅತ್ಯವಶ್ಯಕವಾಗಿ ಬೇಕಿದೆ.

ಚಾಮುಂಡೇಶ್ವರಿ ದೇವಿಯು ನಾಡಿನಲ್ಲಿ ಮಳೆ ಬೆಳೆ ಕೊಟ್ಟು ಎಲ್ಲ ವರ್ಗದ ಜನರು ಶಾಂತಿ ಸೌಹಾರ್ಧತೆಯಿಂದ ಬದುಕುವಂತೆ ಆರ್ಶಿವಾದ ಮಾಡುವಂತೆ ಕ್ಷೇತ್ರದ ಜನತೆಯ ಪರವಾಗಿ ಪ್ರಾರ್ಥಿಸಿ ಕೊಂಡಿರುವುದಾಗಿ ತಿಳಿಸಿದರು.

ಈ ವೇಳೆ ಮಾಜಿ ಶಾಸಕ ಕೆ.ರಾಜು, ನಗರ ಘಟಕದ ಕಾಂಗ್ರೆಸ್ ಅಧ್ಯಕ್ಷ ಎ.ಬಿ.ಚೇತನ್‌ಕುಮಾರ್, ನಗರಾಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿಎನ್‌ಆರ್ ವೆಂಕಟೇಶ್, ಯುವ ಮುಖಂಡ ಗುರುಪ್ರಸಾದ್, ವಾಸು, ಷಡಕ್ಷರಿದೇವ, ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಾಧ್ಯಕ್ಷ ಅನಿಲ್‌ ಜೋಗಿಂದರ್, ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net